AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ರಮೇಶ್ ಬಿ. ಜವಳಗೇರಾ
|

Updated on: Apr 19, 2026 | 1:49 PM

Share

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು...ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕರ್ನಾಟದಲ್ಲಿ ಏನೇನೋ ರಾಜಕೀಯ ಬೆಳವಣಿಗೆಗಳು ಆಗುತ್ತಿವೆ. ಇನ್ನೂ ಮೇ5ರ ನಂತರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೀವೇ ನೋಡಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us