AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಸಭೆ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ: ಈಗೇನಾಗುತ್ತೆ ನೋಡಬೇಕು; ಬಿಕೆ ಹರಿಪ್ರಸಾದ್

RSS ಸಭೆ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ: ಈಗೇನಾಗುತ್ತೆ ನೋಡಬೇಕು; ಬಿಕೆ ಹರಿಪ್ರಸಾದ್

ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2026 | 6:08 PM

Share

ಬೆಳಗಾವಿಯಲ್ಲಿ ನಡೆಯುತ್ತಿರುವ ಆರ್​ಎಸ್​ಎಸ್ ಸಭೆ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, RSS ಸಭೆ ಮಾಡಿದ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ. ಈ ಸಭೆ ಬಳಿಕ ಏನಾಗುತ್ತೆ ಅಂತಾ ನೋಡಬೇಕು ಎಂದು ಹೇಳಿದ್ದಾರೆ. ಇನ್ನು ಅಯೋಧ್ಯೆ ರಾಮಮಂದಿರ ಹುಂಡಿ ಹಣ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಬೆಂಗಳೂರು, ಜುಲೈ 10: ಬೆಳಗಾವಿಯಲ್ಲಿ ಏಕೆ ಆರ್​ಎಸ್​ಎಸ್ ಸಭೆ ಅಂತಾ ಗೊತ್ತಿಲ್ಲ. RSS ಸಭೆ ಮಾಡಿದ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ. ಈ ಹಿಂದೆ ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಅಂತಹವರ ಹತ್ಯೆ ಆಗಿತ್ತು. ಈ ಸಭೆ ಬಳಿಕ ಏನಾಗುತ್ತೆ ಅಂತಾ ನೋಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸ್ಪೋಟಕ​ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರ ಹುಂಡಿ ಹಣ ಕಳ್ಳತನ ಪ್ರಕರಣದ ಕುರಿತು ಬಿಜೆಪಿ ಮತ್ತು ಆರ್​ಎಸ್​ಎಸ್ ವಿರುದ್ಧ ಹರಿಪ್ರಸಾದ್ ತೀವ್ರ ವಾಗ್ದಾಳಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿರುವ ಅವರು, ಟ್ರಸ್ಟ್ ಸ್ಥಾಪನೆ, ಶಿಲಾನ್ಯಾಸ ಮತ್ತು ಪ್ರಾಣ ಪ್ರತಿಷ್ಠಾಪನೆಯ ಜವಾಬ್ದಾರಿಯನ್ನು ಪ್ರಧಾನಿಗಳು ಹೊರಬೇಕು ಎಂದಿದ್ದಾರೆ. 200 ಕೋಟಿ ರೂ ಲೂಟಿ ಮತ್ತು ಅಮೂಲ್ಯ ರಾಮಾಯಣ ಪುಸ್ತಕ ಕಳ್ಳತನವಾಗಿರುವ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More