‘ಸೋಮು ಸೌಂಡ್ ಇಂಜಿನಿಯರ್’ ಚಿತ್ರೀಕರಣದ ಕಷ್ಟಗಳನ್ನು ಹಂಚಿಕೊಂಡ ನಾಯಕಿ

|

Updated on: Mar 09, 2024 | 9:02 PM

Somu Sound Engineer: ‘ಸೋಮು ಸೌಂಡ್ ಇಂಜಿನಿಯರ್’ ಸಿನಿಮಾದ ಆಡಿಲೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ನಾಯಕಿ, ಚಿತ್ರೀಕರಣದ ಸಮಯದಲ್ಲಿ ಎದುರಿಸಿದ ಕಷ್ಟಗಳ ಬಗ್ಗೆ ಮಾತನಾಡಿದರು.

ಸೋಮು ಸೌಂಡ್ ಇಂಜಿನಿಯರ್’ (Somu Sound Engineer) ಸಿನಿಮಾ ಚಿತ್ರೀಕರಣದ ಹಂತದಿಂದಲೂ ಸಖತ್ ಆಗಿ ಸದ್ದು ಮಾಡುತ್ತಿದೆ. ಯುವಕರ ತಂಡ ಶ್ರಮ ಹಾಕಿ ಸಿನಿಮಾ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಲಾಂಚ್​ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಹಾಜರಾಗಿ ಸಿನಿಮಾ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಿನಿಮಾದ ನಾಯಕಿ ನಿವಿಷ್ಕಾ ತಾವು ‘ಸೋಮು ಸೌಂಡ್ ಇಂಜಿನಿಯರ್’ ಸಿನಿಮಾಕ್ಕೆ ಆಯ್ಕೆ ಆಗಿದ್ದು ಹೇಗೆ? ಹಾಗೂ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಎದುರಿಸಿದ ಕಷ್ಟಗಳು ಹೇಗಿದ್ದವು ಎಂಬುದರ ಬಗ್ಗೆ ಮಾತನಾಡಿದರು. ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆಯೂ ನಿವಿಷ್ಕಾ ಮಾತನಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ