AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್​​, ಓರ್ವನ ಬಂಧನ

ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್​​, ಓರ್ವನ ಬಂಧನ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 01, 2026 | 4:32 PM

Share

ಚಾಮರಾಜನಗರದ ಸಾಗಡೆ ಗ್ರಾಮದಲ್ಲಿ ನಿಧಿ ಆಸೆಗಾಗಿ ಪುತ್ರನೇ ತನ್ನ 80 ವರ್ಷದ ತಾಯಿಯನ್ನು ಬಲಿ ಕೊಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂಧಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಮಾಟಗಾರ ಎಸ್ಕೇಪ್​​ ಆಗಿದ್ದಾನೆ. ಗುಂಡಿ ತೋಡಿ ಪೂಜೆ ಮಾಡುತ್ತಿದ್ದ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಚಾಮರಾಜನಗರ, ಮೇ 01: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಇಂದು (ಮೇ 1) ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತೆಂದು ಸ್ಕೆಚ್ ಹಾಕಿದ್ದ ಕೊಂಡಯ್ಯನ ಮಾದಶೆಟ್ಟಿ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ. ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು ಲಿಂಬೆಹಣ್ಣು, ಅರಿಶಿನ ಕುಂಕುಮ ಹಾಗೂ ಕಳಸವಿಟ್ಟು ಪೂಜೆ ಮಾಡಿದ್ದ. ಈ ಬಗ್ಗೆ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮನೆಗೆ ಪೊಲೀಸರು ಬರ್ತಿದ್ದಂತೆ ಮಾಟಗಾರ ಎಸ್ಕೇಪ್ ಆಗಿದ್ದು, ಮಾದಶೆಟ್ಟಿಯನ್ನು ಬಂಧಿಸಲಾಗಿದೆ. ನಿಧಿಗಾಗಿ ಮಾಟ ಮಾಡಿದ ವಿಚಾರ ತಿಳಿದು ಸಾಗಡೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More