AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ದಾಖಲಾಗಿರುವ ಶಾಮನೂರು ಶಿವಶಂಕರಪ್ಪ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪುತ್ರ

ಆಸ್ಪತ್ರೆಗೆ ದಾಖಲಾಗಿರುವ ಶಾಮನೂರು ಶಿವಶಂಕರಪ್ಪ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪುತ್ರ

ರಮೇಶ್ ಬಿ. ಜವಳಗೇರಾ
|

Updated on: Nov 24, 2025 | 6:05 PM

Share

ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ದಾವಣಗೆರೆಯಲ್ಲಿಂದು ಮಾಧ್ಯಮಗಳಿಗೆ ​ ಪ್ರತಿಕ್ರಿಯಿಸಿದ್ದು, ಕ್ಷೇತ್ರದ ಜ‌ನ ಹಾಗೂ ದೇವರ ಆರ್ಶಿವಾದದಿಂದ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಇನ್ನೊಂದು ವಾರದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದು, ದಾವಣಗೆರೆಗೆ ಕರೆದುಕೊಂಡು ಬರಲಾಗುವುದು ಎಂದು ಮಾಹಿತಿ ನೀಡಿದರು.

ಬೆಂಗಳೂರು (ನವೆಂಬರ್ 24): ದಾವಣಗೆರೆ ದಕ್ಷಿಣ ನಿಯೋಜಿತ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಬಗ್ಗೆ ಅವರ ಪುತ್ರ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ದಾವಣಗೆರೆಯಲ್ಲಿಂದು ಮಾಧ್ಯಮಗಳಿಗೆ ​ ಪ್ರತಿಕ್ರಿಯಿಸಿದ್ದು, ಕ್ಷೇತ್ರದ ಜ‌ನ ಹಾಗೂ ದೇವರ ಆರ್ಶಿವಾದದಿಂದ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಇನ್ನೊಂದು ವಾರದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದು, ದಾವಣಗೆರೆಗೆ ಕರೆದುಕೊಂಡು ಬರಲಾಗುವುದು ಎಂದು ಮಾಹಿತಿ ನೀಡಿದರು.