ಆಸ್ಪತ್ರೆಗೆ ದಾಖಲಾಗಿರುವ ಶಾಮನೂರು ಶಿವಶಂಕರಪ್ಪ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪುತ್ರ
ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ದಾವಣಗೆರೆಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕ್ಷೇತ್ರದ ಜನ ಹಾಗೂ ದೇವರ ಆರ್ಶಿವಾದದಿಂದ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಇನ್ನೊಂದು ವಾರದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ದಾವಣಗೆರೆಗೆ ಕರೆದುಕೊಂಡು ಬರಲಾಗುವುದು ಎಂದು ಮಾಹಿತಿ ನೀಡಿದರು.
ಬೆಂಗಳೂರು (ನವೆಂಬರ್ 24): ದಾವಣಗೆರೆ ದಕ್ಷಿಣ ನಿಯೋಜಿತ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಬಗ್ಗೆ ಅವರ ಪುತ್ರ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ದಾವಣಗೆರೆಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕ್ಷೇತ್ರದ ಜನ ಹಾಗೂ ದೇವರ ಆರ್ಶಿವಾದದಿಂದ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಇನ್ನೊಂದು ವಾರದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ದಾವಣಗೆರೆಗೆ ಕರೆದುಕೊಂಡು ಬರಲಾಗುವುದು ಎಂದು ಮಾಹಿತಿ ನೀಡಿದರು.
