AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ ನೋಡಿ

ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ ನೋಡಿ

ಮದನ್​ ಕುಮಾರ್​
|

Updated on: Mar 27, 2026 | 10:10 PM

Share

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ಸಿನಿಮಾಗಳಲ್ಲಿ ಮಾತ್ರವಲ್ಲದೇ ಈಗ ಡಿಜಿಟಲ್ ಲೋಕದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಮಾರ್ಚ್ 27ರಂದು ಸೋನಾಕ್ಷಿ ಸಿನ್ಹಾ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷ (1 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ತಲುಪಿದೆ. ಅದಕ್ಕಾಗಿ ಅವರು ಸಂಭ್ರಮಿಸಿದ್ದಾರೆ.

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಬೆಳ್ಳಿ ಪರದೆಯ ಬಳಿಕ ಈಗ ಡಿಜಿಟಲ್ ಲೋಕದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಮಾರ್ಚ್ 27ರಂದು ಸೋನಾಕ್ಷಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷ (1 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ತಲುಪಿದೆ. ಈ ಕ್ಷಣವನ್ನು ಸಂಭ್ರಮಿಸಲು ಸೋನಾಕ್ಷಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ‘ನನ್ನ ಈ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಅವರು ಬರೆದುಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳಿಂದ ಅಭಿನಂದನೆಗಳ ಕಮೆಂಟ್ ಬಂದಿದೆ. ಸೋನಾಕ್ಷಿ ಸಿನ್ಹಾ ಅವರ ಯೂಟ್ಯೂಬ್ ಚಾನೆಲ್ (Sonakshi Sinha YouTube Channel) ಕೇವಲ ಸಿನಿಮಾ ಪ್ರಚಾರಕ್ಕೆ ಸೀಮಿತವಾಗಿಲ್ಲ. ಬದಲಿಗೆ, ಅವರು ತಮ್ಮ ವೈಯಕ್ತಿಕ ಜೀವನ ಮತ್ತು ಆಸಕ್ತಿಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More