ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ

Updated on: May 21, 2026 | 8:54 AM

ನವದಂಪತಿಗಳಾದ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೊ ಇತ್ತೀಚೆಗೆ ಕಾಡಿನ ಸಫಾರಿಗೆ ತೆರಳಿ ಪ್ರಕೃತಿಯ ಮಡಲಿನಲ್ಲಿ ಕಾಲ ಕಳೆದಿದ್ದಾರೆ. ಈ ವೇಳೆ ಜಿಂಕೆ, ಆನೆ, ನವಿಲುಗಳನ್ನು ಕಣ್ಣುಂಬಿಕೊಂಡು, ಸುಂದರ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಸಂಭ್ರಮಿಸಿದ್ದಾರೆ. ಈ ವಿಡಯೋ ವೈರಲ್ ಆಗಿ ಗಮನ ಸೆಳೆದಿದ್ದಾರೆ. ಇದು ಜನರಿಗೆ ಇಷ್ಟ ಆಗಿದೆ.

ಸ್ಯಾಂಡಲ್‌ವುಡ್‌ನ ತಾರಾ ಜೋಡಿ ತರುಣ್ ಸುಧೀರ್ ಮತ್ತು ಸೋನಲ್ ಮೊಂತೆರೊ ವನ್ಯಜೀವಿಗಳ ವೀಕ್ಷಣೆಗಾಗಿ ಸಫಾರಿ ಪ್ರವಾಸ ಕೈಗೊಂಡಿದ್ದಾರೆ. ದಟ್ಟವಾದ ಕಾಡಿನ ಮಧ್ಯೆ ಜಿಪ್ಸಿ ಗಾಡಿಯಲ್ಲಿ ಪ್ರಯಾಣಿಸುತ್ತಾ, ಪ್ರಕೃತಿಯ ಸೌಂದರ್ಯವನ್ನು ಸವಿದಿದ್ದಾರೆ. ಪ್ರವಾಸದ ಉದ್ದಕ್ಕೂ ವನ್ಯಜೀವಿಗಳಾದ ಆನೆ, ಕೃಷ್ಣಮೃಗ ಮತ್ತು ಗಜಗಾಂಭೀರ್ಯದ ಪ್ರಾಣಿಗಳನ್ನು ಹತ್ತಿರದಿಂದ ವೀಕ್ಷಿಸಿ, ಆ ಸುಂದರ ನೆನಪುಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More