ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ

Updated on: Jan 02, 2026 | 10:38 AM

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ದಂಪತಿಗಳು ದಾಂಪತ್ಯಕ್ಕೆ ಕಾಲಿಟ್ಟು ವರ್ಷ ಕಳೆದಿದೆ. ಈಗ ಈ ದಂಪತಿ ಹೊಸ ಮನೆಗೆ ಕಾಲಿಟ್ಟಿದ್ದಾರೆ. ಗೃಹಪ್ರವೇಶದ ಫೋಟೋಗಳು ಹಾಗೂ ವಿಡಿಯೋಗಳು ವೈರಲ್ ಆಗಿವೆ. ದಂಪತಿಗೆ ಶುಭಾಶಯ ಬರುತ್ತಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. 

ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ (Sonal) ಅವರು ವಿವಾಹ ಆಗಿ ವರ್ಷದ ಬಳಿಕ ಹೊಸ ಮನೆ ಪ್ರವೇಶಿಸಿದ್ದಾರೆ. ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದು, ಅದಕ್ಕೆ ಗೃಹಪ್ರವೇಶ ನಡೆದಿದೆ. ಆ ಸಂದರ್ಭದ ವಿಡಿಯೋನ ಸೋನಲ್ ಹಂಚಿಕೊಂಡಿದ್ದಾರೆ. ಮನೆಯಲ್ಲಿ ಸುಧೀರ್ ಫೋಟೋ ಇಟ್ಟು ಪೂಜೆ ಮಾಡಲಾಗಿದೆ. ಮನೆಗೆ ತರುಣ್ ಗೆಳೆಯ ಶರಣ್, ಶ್ರುತಿ ಮೊದಲಾದವರು ಆಗಮಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More