ಗುಂಪುಗಾರಿಕೆ ಇಲ್ಲ ಎನ್ನುತ್ತಲೇ ಗೇಮ್ ಪ್ಲ್ಯಾನ್: ಕರ್ನಾಟಕ ಕಾಂಗ್ರೆಸ್​ ಬಗ್ಗೆ ದೆಹಲೀಲಿ ಸೋನಿಯಾ, ರಾಹುಲ್ ಚರ್ಚೆ?

Updated By: Ganapathi Sharma

Updated on: Dec 02, 2025 | 11:12 AM

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ‘ಕೊಟ್ಟ ಮಾತು’ ಕುರಿತ ವಿವಾದ ತೀವ್ರಗೊಂಡಿದೆ. ಹೈಕಮಾಂಡ್‌ಗೆ ಬಿಸಿತುಪ್ಪವಾಗಿರುವ ಈ ಚರ್ಚೆ, 2023ರ ಸಿಎಂ ಆಯ್ಕೆ ವೇಳೆ ನಡೆದ ಒಪ್ಪಂದದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು, ಡಿಸೆಂಬರ್ 2: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕುರಿತ ತಿಕ್ಕಾಟಕ್ಕೆ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಬ್ರೇಕ್ ಹಾಕಿದೆ. ಇಂದು ಡಿಸಿಎಂ ನಿವಾಸದಲ್ಲಿ ಸಿಎಂಗೆ ಬ್ರೇಕ್​ಫಾಸ್ಟ್ ಆಯೋಜನೆಯಾಗಿದೆ. ಆದರೆ, ಮತ್ತೊಂದೆಡೆ, ‘ಕೊಟ್ಟ ಮಾತು’ ಎಂಬ ವಿಚಾರ ಮುನ್ನೆಲೆಗೆ ಬಂದಿದೆ. ಡಿಕೆ ಶಿವಕುಮಾರ್ ಆಪ್ತ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು, ‘ಸಮಯ ಬಂದಾಗ ನಾವು ಒಪ್ಪಿಕೊಂಡಿದ್ದನ್ನು ಬಹಿರಂಗಪಡಿಸುತ್ತೇವೆ’ ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಗಳಲ್ಲಿ ‘ಕೊಟ್ಟ ಮಾತು’ ಬಗ್ಗೆ ಚರ್ಚೆಯಾಗಿದೆ ಎಂದು ಡಿ.ಕೆ. ಶಿವಕುಮಾರ್ ತಮ್ಮ ಆಪ್ತರ ಬಳಿ ಪ್ರಸ್ತಾಪಿಸಿದ್ದರು ಎಂದೂ ವರದಿಯಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆ, ಕರ್ನಾಟಕ ಕಾಂಗ್ರೆಸ್​ ಬಗ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 02, 2025 08:15 AM