ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಛತ್ತೀಸ್ ಗಢ್ ನ ರಾಯ್ಪರ್ ಗೆ ಆಗಮಿಸಿದ ಸೋನಿಯಾ ಮತ್ತು ರಾಹುಲ್ ಗಾಂಧಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 24, 2023 | 6:48 PM

ಛತ್ತೀಸ್ ಗಢ್ ರಾಯ್ಪುರ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವರು ತಮ್ಮ ಮಗ ಹಾಗೂ ಸಂಸದ ರಾಹುಲ್ ಗಾಂಧಿಯವರೊಂದಿಗೆ ಆಗಮಿಸಿದಾಗ ಗೆಲುವಾಗಿ ಕಂಡರು.

ಛತ್ತೀಸ್​ಗಢ್: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ (Sonia Gandhi) ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದೆ. ನಿಮಗೆ ಗೊತ್ತಿರಬಹುದು, ಕಳೆದ ಎರಡು ಮೂರು ತಿಂಗಳಿಂದ ಅವರ ಆರೋಗ್ಯ ಸರಿಯಿರಲಿಲ್ಲ. ಕೋವಿಡ್-19 ಸೋಂಕಿಗೊಳಗಾಗಿ ಚೇತರಿಸಿಕೊಂಡ ಬಳಿಕ ಅವರನ್ನು ಎರಡು ಬಾರಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಛತ್ತೀಸ್ ಗಢ್ ರಾಯ್ಪುರ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಅಧಿವೇಶನದಲ್ಲಿ (Congress convention) ಪಾಲ್ಗೊಳ್ಳಲು ಅವರು ತಮ್ಮ ಮಗ ಹಾಗೂ ಸಂಸದ ರಾಹುಲ್ ಗಾಂಧಿಯವರೊಂದಿಗೆ (Rahul Gandhi) ಆಗಮಿಸಿದಾಗ ಗೆಲುವಾಗಿ ಕಂಡರು. ಭದ್ರತಾ ಸಿಬ್ಬಂದಿ ಅವರಿಬ್ಬರನ್ನು ಸುತ್ತುವರಿದಿರುವುದರಿಂದ ಸೋನಿಯಾರನ್ನು ಸರಿಯಾಗಿ ನೋಡುವುದು ಸಾಧ್ಯವಾಗದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 24, 2023 06:48 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.