Video: ದೆಹಲಿ: ಕಾಂಗ್ರೆಸ್ನ ನೂತನ ಪ್ರಧಾನ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ ಗಾಂಧಿ
ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯನ್ನು ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆಯಾಗಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಹಲವಾರು ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಪ್ರಧಾನ ಕಚೇರಿಗೆ ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರನ್ನು ಇಡಲಾಗಿದೆ ಅವರ ಪರಂಪರೆ ಮತ್ತು ರಾಷ್ಟ್ರ ಮತ್ತು ಪಕ್ಷಕ್ಕೆ ನೀಡಿದ ಕೊಡುಗೆಗಳಿಗೆ ಗೌರವಾರ್ಥವಾಗಿ ಈ ಹೆಸರು ಇಡಲಾಗಿದೆ. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ನೂತನ ಪ್ರಧಾನ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ ವಂದೇ ಮಾತರಂ ಹಾಗೂ ರಾಷ್ಟ್ರಗೀತೆಯನ್ನು ಹಾಡಿದರು. ನಂತರ ಸೋನಿಯಾ ಗಾಂಧಿ ಅವರು ಕಟ್ಟಡವನ್ನು ಉದ್ಘಾಟಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ತನ್ನ ಸರ್ಕಾರವನ್ನು ಕಳೆದುಕೊಂಡಾಗಿನಿಂದ ಹೊಸ ಎಐಸಿಸಿ ಪ್ರಧಾನ ಕಚೇರಿಯ ನಿರ್ಮಾಣವು ಹಣದ ಕೊರತೆ ಯಿಂದ ಹಲವಾರು ವರ್ಷಗಳ ಕಾಲ ವಿಳಂಬವಾಯಿತು. ಇಂದಿರಾ ಭವನ’ ಪಕ್ಷ ಮತ್ತು ಅದರ ನಾಯಕರ ಹೆಚ್ಚುತ್ತಿರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ, ಆಡಳಿತಾತ್ಮಕ, ಸಾಂಸ್ಥಿಕ ಮತ್ತು ಕಾರ್ಯತಂತ್ರದ ಕಾರ್ಯಗಳನ್ನು ಬೆಂಬಲಿಸಲು ಆಧುನಿಕ ಸೌಲಭ್ಯಗಳನ್ನು ಹೊಂದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್ನಲ್ಲೇ ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್