AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ; ಖಡಕ್ ರಿಯಾಕ್ಷನ್ ಕೊಟ್ಟ ಸಚಿವ ಪ್ರಹ್ಲಾದ್​ ಜೋಶಿ, ಇಲ್ಲಿದೆ ವಿಡಿಯೋ

ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ; ಖಡಕ್ ರಿಯಾಕ್ಷನ್ ಕೊಟ್ಟ ಸಚಿವ ಪ್ರಹ್ಲಾದ್​ ಜೋಶಿ, ಇಲ್ಲಿದೆ ವಿಡಿಯೋ

ಹರೀಶ್ ಜಿ.ಆರ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 06, 2023 | 8:38 PM

Share

ಪ್ರಜಾಪ್ರಭುತ್ವದ ದೇಗುಲ ಸಂಸತ್ ಕಾರ್ಯವೈಖರಿ ಅದನ್ನು ರಾಜಕೀಯಗೊಳಿಸಬೇಡಿ. ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸಬೇಡಿ. ಹೀಗೆ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ದೆಹಲಿ, ಸೆ.06: ಪ್ರಧಾನಿ ನರೇಂದ್ರ ಮೋದಿಗೆ ಸೋನಿಯಾ ಗಾಂಧಿ(Sonia Gandhi) ಪತ್ರ ಬರೆದ ವಿಚಾರ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Prahlad Joshi) ‘ಪ್ರಜಾಪ್ರಭುತ್ವದ ದೇಗುಲ ಸಂಸತ್ ಕಾರ್ಯವೈಖರಿ ಅದನ್ನು ರಾಜಕೀಯಗೊಳಿಸಬೇಡಿ. ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸಬೇಡಿ. ಹೀಗೆ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದರು. ದೆಹಲಿಯಲ್ಲಿ ಮಾತನಾಡಿದ ಅವರು ‘ ಬಹುಶಃ ನೀವು ಸಂಪ್ರದಾಯಗಳಿಗೆ ಗಮನ ಕೊಡುವುದಿಲ್ಲ. ಅಧಿವೇಶನ ಕರೆಯುವ ಮೊದಲು ರಾಜಕೀಯ ಪಕ್ಷಗಳ ಜತೆ ಚರ್ಚಿಸುವುದಿಲ್ಲ. ಸದನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ನಮ್ಮ ಸರ್ಕಾರ ಸಿದ್ಧವಿದೆ. ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಯಾಗಿದೆ. ನೀವು ಉಲ್ಲೇಖಿಸಿರುವ ಎಲ್ಲ ವಿಷಯ ಪ್ರಸ್ತಾಪವಾಗಿದ್ದು, ಸರ್ಕಾರ ಸ್ಪಂದಿಸಿದೆ. ಸಂಸತ್​ನ ಘನತೆಯನ್ನು ನಾವು ಕಾಪಾಡುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More