ಸೋನಿಯಾ, ಪ್ರಿಯಾಂಕಾ ಗಾಂಧಿಯನ್ನು ತಬ್ಬಿ ಸ್ವಾಗತಿಸಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ
ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ದೆಹಲಿಗೆ ಆಗಮಿಸಿದ್ದಾರೆ.
ನೆಹರು ಕುಟುಂಬಕ್ಕೂ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Bangladesh PM Sheikh Hasina) ಅವರ ಕುಟುಂಬಕ್ಕೂ ಬಹಳ ಆತ್ಮೀಯ ಒಡನಾಟವಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ (Narendra Modi Oath Taking Ceremony) ಸಮಾರಂಭಕ್ಕೆ ನಿನ್ನೆ ದೆಹಲಿಗೆ ಆಗಮಿಸಿರುವ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರನ್ನು ಇಂದು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ಗಾಂಧಿ (Priyanka Gandhi) ಭೇಟಿಯಾಗಿದ್ದಾರೆ. ಈ ವೇಳೆ ಗಾಂಧಿ ಕುಟುಂಬವನ್ನು ಆತ್ಮೀಯವಾಗಿ ಬರಮಾಡಿಕೊಂಡ ಶೇಖ್ ಹಸೀನಾ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯನ್ನು ತಬ್ಬಿಕೊಂಡು ಸ್ವಾಗತಿಸಿದ್ದಾರೆ.
ಶೇಖ್ ಹಸೀನಾ ಮತ್ತು ಗಾಂಧಿ ಕುಟುಂಬದ ನಡುವಿನ ಸಂಪರ್ಕ ಬಹಳ ಹಳೆಯದ್ದು. ಇಂದಿರಾ ಗಾಂಧಿ ಕಾಲದಿಂದಲೂ ಈ ಎರಡೂ ಕುಟುಂಬಕ್ಕೆ ಆತ್ಮೀಯ ಒಡನಾಟವಿದೆ. ಶೇಖ್ ಹಸೀನಾ ಅವರ ತಂದೆ ಮತ್ತು ಬಾಂಗ್ಲಾದೇಶದ ಸಂಸ್ಥಾಪಕ ನಾಯಕ ಶೇಖ್ ಮುಜಿಬುರ್ ರೆಹಮಾನ್ ಅವರು ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರೊಂದಿಗೆ ಸೌಹಾರ್ದ ಸಂಬಂಧವನ್ನು ಹೊಂದಿದ್ದರು. 1971ರಲ್ಲಿ ಬಾಂಗ್ಲಾದೇಶ ವಿಮೋಚನಾ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿಯವರು ಮಹತ್ವದ ಪಾತ್ರವನ್ನು ವಹಿಸಿದರು. ಪಾಕಿಸ್ತಾನದಿಂದ ಬಾಂಗ್ಲಾದೇಶದ ಸ್ವಾತಂತ್ರ್ಯವನ್ನು ಬೆಂಬಲಿಸಿದರು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ