AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನಾಚರಣೆ ವೇಳೆ 'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?

ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?

ಸುಷ್ಮಾ ಚಕ್ರೆ
|

Updated on: Aug 15, 2026 | 3:58 PM

Share

ಕಾಂಗ್ರೆಸ್ ನಾಯಕರಿಗೆ ರಾಷ್ಟ್ರೀಯ ಗೀತೆ ಎಂದರೆ ಅಸಹನೆ, ಇದು ವಂದೇ ಮಾತರಂ ಗೀತೆಗೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕ್ರಮದ ಈ ವಿಡಿಯೋದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಇತರ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಿರುವುದನ್ನು ನೋಡಬಹುದು. ಆಗ ವಂದೇ ಮಾತರಂ ಗೀತೆಯ ಗಾಯನ ಶುರುವಾಗುತ್ತಿದ್ದಂತೆ, ಸೋನಿಯಾ ಗಾಂಧಿ ಮತ್ತು ಖರ್ಗೆ ಅವರು ತಮ್ಮ ಸುತ್ತಮುತ್ತಲಿದ್ದವರಿಗೆ ಕೈಸನ್ನೆ ಮಾಡುವ ಮೂಲಕ ಹಾಡುವುದನ್ನು ಅಥವಾ ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ನವದೆಹಲಿ, ಆಗಸ್ಟ್ 15: ನವದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬೆನ್ನಲ್ಲೇ ಹೊಸ ರಾಜಕೀಯ ವಿವಾದ ಸೃಷ್ಟಿಯಾಗಿದೆ. ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ (Vande Mataram) ಗಾಯನವನ್ನು ನಿಲ್ಲಿಸುವಂತೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕಾರ್ಯಕರ್ತರಿಗೆ ಸನ್ನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರಗೀತೆಗೆ ನೀಡುವ ಗೌರವವನ್ನೇ ವಂದೇ ಮಾತರಂ ಗೀತೆಗೂ ನೀಡಬೇಕೆಂಬ ನಿಯಮವಿದ್ದರೂ ಸೋನಿಯಾ ಗಾಂಧಿ ವಂದೇ ಮಾತರಂ ಗೀತೆ ಪ್ಲೇ ಆಗುತ್ತಿದ್ದಂತೆ ಕಾರ್ಯಕರ್ತರ ಬಳಿ ಬಿಸಿಬಿಸಿ ಚರ್ಚೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಕಾಂಗ್ರೆಸ್ ನಾಯಕರಿಗೆ ರಾಷ್ಟ್ರೀಯ ಗೀತೆ ಎಂದರೆ ಅಸಹನೆ, ಇದು ವಂದೇ ಮಾತರಂ ಗೀತೆಗೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕ್ರಮದ ಈ ವಿಡಿಯೋದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಇತರ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಿರುವುದನ್ನು ನೋಡಬಹುದು. ಆಗ ವಂದೇ ಮಾತರಂ ಗೀತೆಯ ಗಾಯನ ಶುರುವಾಗುತ್ತಿದ್ದಂತೆ, ಸೋನಿಯಾ ಗಾಂಧಿ ಮತ್ತು ಖರ್ಗೆ ಅವರು ತಮ್ಮ ಸುತ್ತಮುತ್ತಲಿದ್ದವರಿಗೆ ಕೈಸನ್ನೆ ಮಾಡುವ ಮೂಲಕ ಹಾಡುವುದನ್ನು ಅಥವಾ ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us