Family says routine checkup: ಸೋನಿಯಾ ಗಾಂಧಿ ಪುನಃ ಅಸ್ವಸ್ಥ, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು

ಅರುಣ್​ ಕುಮಾರ್​ ಬೆಳ್ಳಿ

Updated on: Mar 03, 2023 | 3:53 PM

ಕುಟುಂಬದ ಮೂಲಗಳ ಪ್ರಕಾರ ಅವರ ಅರೋಗ್ಯ ಸ್ಥಿರವಾಗಿದ್ದು ಸಾಮಾನ್ಯ ತಪಾಸಣೆಗೋಸ್ಕರ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ನವದೆಹಲಿ: ಪದೇಪದೆ ಅಸ್ವಸ್ಥರಾಗುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ (Sonia Gandhi) ಪುನಃ ಅಸ್ಪತ್ರೆಗೆ ದಾಖಲಾಗಿದ್ದಾರೆ. ನಮಗೆ ಲಭ್ಯವಾಗಿರವ ಮಾಹಿತಿಯ ಪ್ರಕಾರ ಸೋನಿಯಾ ಗಾಂಧಿ ಜ್ವರದಿಂದ (fever) ಬಳಲುತ್ತಿದ್ದಾರೆ. ಆದರೆ ಕುಟುಂಬದ ಮೂಲಗಳ ಪ್ರಕಾರ ಅವರ ಅರೋಗ್ಯ ಸ್ಥಿರವಾಗಿದ್ದು ಸಾಮಾನ್ಯ ತಪಾಸಣೆಗೋಸ್ಕರ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ (Gangaram Hospital) ದಾಖಲಿಸಲಾಗಿದೆ. ಇತ್ತೀಚಿಗಷ್ಟೇ ಅವರು ಛತ್ತೀಸ್ ಗಢ್ ನ ರಾಯ್ಪುರ್ ನಲ್ಲಿ ಅಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಭಾಗವಹಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 03, 2023 03:53 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.