ಸೋನಿಯಾ ಗಾಂಧಿಯ ‘ಬಿಲಾಂಗಿಂಗ್; ಎ ಜರ್ನಿ ಆಫ್ ಲವ್’ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಇಟಲಿಯ ಪುಟ್ಟ ಪಟ್ಟಣವಾದ ಲೂಸಿಯಾನಾದಲ್ಲಿ ಜನಿಸಿದ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರನ್ನು ಭೇಟಿಯಾದ ಕ್ಷಣದಿಂದ ಹಿಡಿದು, ವಿವಾಹದ ನಂತರ ಭಾರತಕ್ಕೆ ಬಂದು ಇಲ್ಲಿನ ಸಂಸ್ಕೃತಿ, ಭಾಷೆ ಮತ್ತು ಜನಜೀವನದೊಂದಿಗೆ ಒಂದಾದ ಆತ್ಮೀಯ ಅನುಭವಗಳನ್ನು ಈ ಕೃತಿಯಲ್ಲಿ ಹಂಚಿಕೊಂಡಿದ್ದಾರೆ. ಗಾಂಧಿ ಕುಟುಂಬದ ಸೊಸೆಯಾಗಿ ಅತ್ತೆ ಇಂದಿರಾ ಗಾಂಧಿ ಅವರೊಂದಿಗಿನ ಒಡನಾಟ, ರಾಜೀವ್ ಗಾಂಧಿ ಅವರೊಂದಿಗಿನ ಪ್ರೇಮ ಮತ್ತು ದಾಂಪತ್ಯ ಜೀವನ, ಬಳಿಕ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹತ್ಯೆಗಳಂತಹ ಘೋರ ದುರಂತಗಳನ್ನು ಎದುರಿಸಿದ ರೀತಿಯನ್ನು ಪುಸ್ತಕದಲ್ಲಿ ವಿವರಿಸಲಾಗಿದೆ.
ನವದೆಹಲಿ, ನವೆಂಬರ್ 16: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬರೆದಿರುವ ಬಹುನಿರೀಕ್ಷಿತ ಕೃತಿ ‘ಬಿಲಾಂಗಿಂಗ್; ಎ ಜರ್ನಿ ಆಫ್ ಲವ್’ ಇಂದು (ನವೆಂಬರ್ 16) ಸಂಜೆ 6.30ಕ್ಕೆ ನವದೆಹಲಿಯಲ್ಲಿ ಅಧಿಕೃತವಾಗಿ ಬಿಡುಗಡೆಯಾಗುತ್ತಿದೆ. ಈ ಪುಸ್ತಕದಲ್ಲಿ ಸೋನಿಯಾ ಗಾಂಧಿ ಅವರು ತಮ್ಮ ಜೀವನದ ಅತ್ಯಂತ ವೈಯಕ್ತಿಕ ಹಾಗೂ ಭಾವನಾತ್ಮಕ ಪಯಣವನ್ನು ಅಕ್ಷರ ರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಈ ಪುಸ್ತಕ ನವೆಂಬರ್ 10ರಂದೇ ಜಗತ್ತಿನಾದ್ಯಂತ ಮಾರುಕಟ್ಟೆಗೆ ಬಿಡುಗಡೆಯಾಗಿದ್ದರೂ ಇಂದು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗುತ್ತಿದೆ. ಇದಕ್ಕಾಗಿ ಸೋನಿಯಾ ಗಾಂಧಿಯವರ ಆಪ್ತರು ಹಾಗೂ ಪ್ರಕಾಶಕರ ಆಪ್ತವಲಯವನ್ನು ಆಹ್ವಾನಿಸಲಾಗಿದೆ.
ಇಟಲಿಯ ಪುಟ್ಟ ಪಟ್ಟಣವಾದ ಲೂಸಿಯಾನಾದಲ್ಲಿ ಜನಿಸಿದ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರನ್ನು ಭೇಟಿಯಾದ ಕ್ಷಣದಿಂದ ಹಿಡಿದು, ವಿವಾಹದ ನಂತರ ಭಾರತಕ್ಕೆ ಬಂದು ಇಲ್ಲಿನ ಸಂಸ್ಕೃತಿ, ಭಾಷೆ ಮತ್ತು ಜನಜೀವನದೊಂದಿಗೆ ಒಂದಾದ ಆತ್ಮೀಯ ಅನುಭವಗಳನ್ನು ಈ ಕೃತಿಯಲ್ಲಿ ಹಂಚಿಕೊಂಡಿದ್ದಾರೆ. ಗಾಂಧಿ ಕುಟುಂಬದ ಸೊಸೆಯಾಗಿ ಅತ್ತೆ ಇಂದಿರಾ ಗಾಂಧಿ ಅವರೊಂದಿಗಿನ ಒಡನಾಟ, ರಾಜೀವ್ ಗಾಂಧಿ ಅವರೊಂದಿಗಿನ ಪ್ರೇಮ ಮತ್ತು ದಾಂಪತ್ಯ ಜೀವನ, ಬಳಿಕ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹತ್ಯೆಗಳಂತಹ ಘೋರ ದುರಂತಗಳನ್ನು ಎದುರಿಸಿದ ರೀತಿಯನ್ನು ಪುಸ್ತಕದಲ್ಲಿ ವಿವರಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

