‘ಅನೇಕ ಬಾರಿ ದೇವರಿಗೆ ಬೈದುಕೊಂಡಿದ್ದೇನೆ’; ದಾಂಪತ್ಯ ಜೀವನ ಮುರಿದುಬಿದ್ದ ಬಗ್ಗೆ ಮಾತನಾಡಿದ ನಟಿ ಸೋನು ಗೌಡ

| Updated By: ರಾಜೇಶ್ ದುಗ್ಗುಮನೆ

Updated on: Jun 15, 2022 | 9:52 PM

ಸೋನು ಗೌಡ ಅವರು ಈ ಮೊದಲು ಮದುವೆ ಆಗಿದ್ದರು. ಟಿವಿ9 ಕನ್ನಡದ ಜತೆ ಮಾತನಾಡಿದ ಸೋನು ಗೌಡ ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ನಡೆದ ಕೆಲ ಘಟನೆಗಳನ್ನೂ ನೆನಪಿಸಿಕೊಂಡಿದ್ದಾರೆ.

ನಟಿ ಸೋನು ಗೌಡ ಅವರು (Sonu Gowda) ಸ್ಯಾಂಡಲ್​ವುಡ್​ನಲ್ಲಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ವೈಯಕ್ತಿಕ ವಿಚಾರದಿಂದಲೂ ಆಗಾಗ ಸುದ್ದಿ ಆಗುತ್ತಾರೆ. ಸೋನು ಗೌಡ ಅವರು ಈ ಮೊದಲು ಮದುವೆ ಆಗಿದ್ದರು. ಆದರೆ, ಅವರ ದಾಂಪತ್ಯ ಜೀವನ ಮುರಿದು ಬಿತ್ತು. ಈಗ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ವೆಡ್ಡಿಂಗ್ ಗಿಫ್ಟ್’ ಚಿತ್ರದಲ್ಲಿ (Wedding Movie) ಪ್ರೇಮಾ ಜತೆ ಅವರು ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಹಾಗು ಹಾಡನ್ನು ಚಿತ್ರತಂಡ ರಿಲೀಸ್ ಮಾಡಿದೆ. ಈ ಕಾರ್ಯಕ್ರಮ ಮುಗಿದ ಬಳಿಕ ಟಿವಿ9 ಕನ್ನಡದ ಜತೆ ಮಾತನಾಡಿದ ಸೋನು ಗೌಡ ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ನಡೆದ ಕೆಲ ಘಟನೆಗಳನ್ನೂ ನೆನಪಿಸಿಕೊಂಡಿದ್ದಾರೆ. ಅವರು ಹೇಳಿದ ಮಾತು ಈ ವಿಡಿಯೋದಲ್ಲಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ಮಾಡಿ.

Published on: Jun 15, 2022 08:17 PM