ಜೈಲಿನಿಂದ ಹೊರಬಂದ ಬಳಿಕ ಸೋನು ಶ್ರೀನಿವಾಸ್ ಗೌಡ ಸಂಪೂರ್ಣ ಸೈಲೆಂಟ್
ಹೆಣ್ಣು ಮಗುವನ್ನು ದತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನುಗಳನ್ನು ಸೋನು ಶ್ರೀನಿವಾಸ್ ಗೌಡ ಅವರು ಗಾಳಿಗೆ ತೂರಿದ್ದರು ಎಂಬ ಆರೋಪ ಇದೆ. ಹಾಗಾಗಿ ಅವರನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ಇನ್ನೂ ನಡೆಯುತ್ತಿದ್ದು, ಸದ್ಯಕ್ಕೆ ಜಾಮೀನಿನ ಮೇಲೆ ಸೋನು ಗೌಡ ಹೊರಗೆ ಬಂದಿದ್ದಾರೆ. ಪರಪ್ಪನ ಅಗ್ರಹಾರ ಗೇಟ್ ಬಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು ಅಕ್ರಮವಾಗಿ ಹೆಣ್ಣು ಮಗು ದತ್ತು ಪಡೆದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಜೈಲಿನಿಂದ ಹೊರಬಂದ ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಿ ಬಂದಿರುವ ಅವರನ್ನು ಸಂಬಂಧಿಕರು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಸೋನು ಗೌಡ (Sonu Gowda) ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಲಾಯಿತು. ಆದರೆ ಲಾಯರ್ ಸೂಚನೆ ಮೇರೆಗೆ ಸೋನು ಗೌಡ ಅವರು ಒಂದು ಅಕ್ಷರವನ್ನೂ ಮಾತನಾಡಿಲ್ಲ. ಸದ್ಯಕ್ಕಂತೂ ಅವರು ಸಂಪೂರ್ಣ ಸೈಲೆಂಟ್ ಆಗಿದ್ದಾರೆ. ವೈರಲ್ ವಿಡಿಯೋ ಹಾಗೂ ರೀಲ್ಸ್ ಮೂಲಕ ಫೇಮಸ್ ಆಗಿದ್ದ ಸೋನು ಶ್ರೀನಿವಾಸ್ ಗೌಡ ಅವರು ಒಂದಷ್ಟು ತಿಂಗಳ ಹಿಂದೆ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದರು. ಆದರೆ ದತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಯನ್ನು ಅವರು ಗಾಳಿಗೆ ತೂರಿದ್ದರು. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ (Sonu Gowda Case) ತನಿಖೆ ಇನ್ನೂ ನಡೆಯುತ್ತಿದೆ. ಸದ್ಯಕ್ಕೆ ಜಾಮೀನಿನ ಮೇಲೆ ಸೋನು ಶ್ರೀನಿವಾಸ್ ಗೌಡ ಹೊರಗೆ ಬಂದಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕವಾದರೂ ಅವರು ಏನಾದರೂ ಸ್ಪಷ್ಟನೆ ನೀಡುತ್ತಾರಾ ಎಂಬ ಕೌತುಕ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.