ಜೈಲಿನಿಂದ ಹೊರಬಂದ ಬಳಿಕ ಸೋನು ಶ್ರೀನಿವಾಸ್​ ಗೌಡ ಸಂಪೂರ್ಣ ಸೈಲೆಂಟ್​

Updated on: Apr 07, 2024 | 10:59 AM

ಹೆಣ್ಣು ಮಗುವನ್ನು ದತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನುಗಳನ್ನು ಸೋನು ಶ್ರೀನಿವಾಸ್​ ಗೌಡ ಅವರು ಗಾಳಿಗೆ ತೂರಿದ್ದರು ಎಂಬ ಆರೋಪ ಇದೆ. ಹಾಗಾಗಿ ಅವರನ್ನು ಬಂಧಿಸಲಾಗಿತ್ತು. ಈ ಕೇಸ್​ ತನಿಖೆ ಇನ್ನೂ ನಡೆಯುತ್ತಿದ್ದು, ಸದ್ಯಕ್ಕೆ ಜಾಮೀನಿನ ಮೇಲೆ ಸೋನು ಗೌಡ ಹೊರಗೆ ಬಂದಿದ್ದಾರೆ. ಪರಪ್ಪನ ಅಗ್ರಹಾರ ಗೇಟ್​ ಬಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.

ಮಾಜಿ ಬಿಗ್​ ಬಾಸ್​ ಸ್ಪರ್ಧಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ಅಕ್ರಮವಾಗಿ ಹೆಣ್ಣು ಮಗು ದತ್ತು ಪಡೆದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಜೈಲಿನಿಂದ ಹೊರಬಂದ ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಪರಪ್ಪನ ಅಗ್ರಹಾರದಿಂದ ರಿಲೀಸ್​ ಆಗಿ ಬಂದಿರುವ ಅವರನ್ನು ಸಂಬಂಧಿಕರು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಸೋನು ಗೌಡ (Sonu Gowda) ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಲಾಯಿತು. ಆದರೆ ಲಾಯರ್​ ಸೂಚನೆ ಮೇರೆಗೆ ಸೋನು ಗೌಡ ಅವರು ಒಂದು ಅಕ್ಷರವನ್ನೂ ಮಾತನಾಡಿಲ್ಲ. ಸದ್ಯಕ್ಕಂತೂ ಅವರು ಸಂಪೂರ್ಣ ಸೈಲೆಂಟ್​ ಆಗಿದ್ದಾರೆ. ವೈರಲ್​ ವಿಡಿಯೋ ಹಾಗೂ ರೀಲ್ಸ್​ ಮೂಲಕ ಫೇಮಸ್​ ಆಗಿದ್ದ ಸೋನು ಶ್ರೀನಿವಾಸ್​ ಗೌಡ ಅವರು ಒಂದಷ್ಟು ತಿಂಗಳ ಹಿಂದೆ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದರು. ಆದರೆ ದತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಯನ್ನು ಅವರು ಗಾಳಿಗೆ ತೂರಿದ್ದರು. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ (Sonu Gowda Case) ತನಿಖೆ ಇನ್ನೂ ನಡೆಯುತ್ತಿದೆ. ಸದ್ಯಕ್ಕೆ ಜಾಮೀನಿನ ಮೇಲೆ ಸೋನು ಶ್ರೀನಿವಾಸ್​ ಗೌಡ ಹೊರಗೆ ಬಂದಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕವಾದರೂ ಅವರು ಏನಾದರೂ ಸ್ಪಷ್ಟನೆ ನೀಡುತ್ತಾರಾ ಎಂಬ ಕೌತುಕ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More