ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ: ಕೆಎಸ್ ಈಶ್ವರಪ್ಪ
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದಿತ್ತು ಈ ಬಾರಿ ಎಷ್ಟು ಗೆಲ್ಲುತ್ತೇವೆಯೋ ಗೊತ್ತಿಲ್ಲ, ಆದರೆ ಒಂದು ಮಾತು ಸತ್ಯ, ಚುನಾವಣೆಯ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಯುತ್ತಾರೆ, ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಸೋಲುತ್ತಾರೆ ಮತ್ತು ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಿ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ವಾಪಸ್ಸು ಬರುತ್ತದೆ ಎಂದು ಈಶ್ವರಪ್ಪ ಹೇಳಿದರು.
ಉಡುಪಿ: ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಕುಟುಂಬದ ವಿರುದ್ಧ ಸಿಡಿದೆದ್ದಿರುವ ಕೆಎಸ್ ಈಶ್ವರಪ್ಪ (KS Eshwarappa) ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ (independent candidate) ತಮ್ಮ ಚುನಾವಣಾ ಪ್ರಚಾರ ಮತ್ತು ಪತ್ರಿಕಾ ಗೋಷ್ಟಿಯಲ್ಲಿ ಶೇಕಡಾ 95 ರಷ್ಟು ಭಾಗವನ್ನು ಯಡಿಯೂರಪ್ಪ ಮತ್ತು ಅವರ ಮಕ್ಕಳನ್ನು ತೆಗಳುವುದಕ್ಕೆ ಮೀಸಲಿಡುತ್ತಾರೆ. ಇಂದು ಉಡುಪಿಯಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಈಶ್ವರಪ್ಪ, ಯಡಿಯೂರಪ್ಪ ಕುಟುಂಬ ಶಿವಮೊಗ್ಗದ ಕಾರ್ಯಕರ್ತರಿಗೆ ನಗರಸಭಾ ಚುನಾವಣೆಗೆ ಟಿಕೆಟ್ ನೀಡುವ ಸುಳ್ಳು ಹೇಳಿ ಅವರನ್ನು ತನ್ಮಿಂದ ದೂರ ಮಾಡುತ್ತಿದ್ದಾರೆ, ಆ ಕುಟುಂಬ ಮಾಡುತ್ತಿರುವ ಮೋಸವನ್ನು ವಿವರಿಸಿದ ಬಳಿಕ ಕಾರ್ಯಕರ್ತರಿಗೆ ಜ್ಞಾನೋದಯವಾಗುತ್ತಿದೆ ಎಂದು ಹೇಳಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದಿತ್ತು ಈ ಬಾರಿ ಎಷ್ಟು ಗೆಲ್ಲುತ್ತೇವೆಯೋ ಗೊತ್ತಿಲ್ಲ, ಆದರೆ ಒಂದು ಮಾತು ಸತ್ಯ, ಚುನಾವಣೆಯ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಯುತ್ತಾರೆ, ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಸೋಲುತ್ತಾರೆ ಮತ್ತು ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಿ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ವಾಪಸ್ಸು ಬರುತ್ತದೆ ಎಂದು ಈಶ್ವರಪ್ಪ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚಿತ್ರದುರ್ಗ ಬಿಜೆಪಿ ಟಿಕೆಟ್ ಮಿಸ್: ಯಡಿಯೂರಪ್ಪ-ವಿಜಯೇಂದ್ರ ವಿರುದ್ಧ ಬಂಡಾಯವೆದ್ದ ತಂದೆ-ಮಗ