ತ್ಯಾಗ ಮಾಡಿ ಎಲ್ಲರ ಎದುರು ಹೀರೋ ಆದ ಸೂರಜ್; ನಾಯಕತ್ವ ಎಂದರೆ ಇದು

Updated on: Oct 23, 2025 | 9:52 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸೂರಜ್ ಸಿಂಗ್ ಅವರ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಅವರು ತಮ್ಮ ಆಟದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಈಗ ನಾಯಕತ್ವದ ಮೂಲಕ ಎಲ್ಲರ ಗಮನ ಸೆಳೆದರು. ಅವರ ಆಟ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಪ್ರೋಮೋ ಗಮನ ಸೆಳೆದಿದೆ.

‘ಬಿಗ್ ಬಾಸ್’ ಆಟದಲ್ಲಿ ಯಾರೂ ತ್ಯಾಗ ಮಾಡೋಕೆ ರೆಡಿ ಇರುವುದಿಲ್ಲ. ಆದರೆ, ಕೆಲವರು ಆ ರೀತಿ ಅಲ್ಲ. ಆಟಕ್ಕಿಂತ ಮಾನವೀಯತೆ ಮುಖ್ಯ ಎಂದು ತ್ಯಾಗ ಮಾಡಲು ರೆಡಿ ಇರುತ್ತಾರೆ. ಇದಕ್ಕೆ ಹೊಸ ಉದಾಹರಣೆ ಸೂರಜ್ ಸಿಂಗ್. ಅವರು ಒಂದು ತಂಡದ ನಾಯಕ ಆಗಿದ್ದರು. ತಂಡ ಗೆಲ್ಲಲಿ ಅಥವಾ ಬಿಡಲಿ ತಂಡದ ನಾಯಕನಾಗಿದ್ದರಿಂದ ನೇರವಾಗಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗುವ ಅವಕಾಶವನ್ನು ಬಿಗ್ ಬಾಸ್ ನೀಡಿದರು. ಹೀಗೆ ಮಾಡಿದರೆ ತಂಡದ ಉಳಿದ ಸದಸ್ಯರು ಕ್ಯಾಪ್ಟನ್ಸಿ ರೇಸ್​ನಿಂದ ಹಿಂದೆ ಸರಿಯಬೇಕಾಗುತ್ತದೆ. ಆದರೆ, ಇದನ್ನು ಸೂರಜ್ ಬೇಡ ಎಂದಿದ್ದಾರೆ. ಇದರಿಂದ ಅವರು ರಿಯಲ್ ಹೀರೋ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 23, 2025 09:50 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More