AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೊಲೆ ಕೇಸ್​: ಎಸ್​​ಐಟಿಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ

ಸೌಜನ್ಯ ಕೊಲೆ ಕೇಸ್​: ಎಸ್​​ಐಟಿಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Oct 10, 2026 | 2:50 PM

Share

ಮುಖ್ಯಾಂಶಗಳು

  • ಸೌಜನ್ಯ ಕೊಲೆ ಪ್ರಕರಣ
  • ಎಸ್​ಐಟಿ ಅ​ಧಿಕಾರಿಗೆ ಮುಚ್ಚಿದ ಲಕೋಟೆ ಕೊಟ್ಟ ಸಾಮಾಜಿಕ ಹೋರಾಟಗಾರ ಟಿ.ಜಯಂತ್
  • ಒಂದಿಷ್ಟು ಜನರ ಹೆಸರನ್ನು ಕೊಟ್ಟಿದ್ದೇನೆ ಎಂದ ಟಿ.ಜಯಂತ್

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ, ಸಾಮಾಜಿಕ ಹೋರಾಟಗಾರ ಜಯಂತ್ ಟಿ ಅವರು ವಿಶೇಷ ತನಿಖಾ ದಳಕ್ಕೆ ಮುಚ್ಚಿದ ಲಕೋಟೆಯಲ್ಲಿ ಪ್ರಮುಖ ಮಾಹಿತಿ ಸಲ್ಲಿಸಿದ್ದಾರೆ. ಈ ಲಕೋಟೆಯಲ್ಲಿ ಪ್ರಕರಣದ ಬಗ್ಗೆ ತಿಳಿದಿರುವ ವ್ಯಕ್ತಿಗಳ ಮಾಹಿತಿ ಇದ್ದು, ಅವರು ಸಾಕ್ಷಿಗಳಾಗಬಹುದು ಅಥವಾ ಆರೋಪಿಗಳಾಗಬಹುದು ಎಂದು ಜಯಂತ್ ಹೇಳಿದ್ದಾರೆ.

ಮಂಗಳೂರು, ಅಕ್ಟೋಬರ್​​ 10: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ಎಸ್‌ಐಟಿ ನಡೆಸಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಜಯಂತ್ ಟಿ, ಎಸ್​ಐಟಿ ಕಚೇರಿಗೆ ಭೇಟಿ ನೀಡಿದ್ದು, ಮುಚ್ಚಿದ ಲಕೋಟೆಯೊಂದನ್ನು ನೀಡಿದ್ದಾರೆ. ಎಸ್​ಐಟಿ ಕಚೇರಿಯಲ್ಲಿ ಸುಧೀರ್ ಕುಮಾರ್ ರೆಡ್ಡಿ ಇಲ್ಲದ ಕಾರಣ, ಪೊಲೀಸ್ ಕಮಿಷನರ್ ಕಚೇರಿಗೆ ಬಂದು ಲಕೋಟೆ ನೀಡಿದ್ದಾರೆ. ಆ ಬಳಿಕ ಟಿವಿ9 ಜೊತೆಗೆ ಮಾತನಾಡಿದ ಅವರು, ‘ಮುಚ್ಚಿದ ಲಕೋಟೆಯಲ್ಲಿ ಒಂದಿಷ್ಟು ಜನರ ಹೆಸರನ್ನು ಕೊಟ್ಟಿದ್ದೇನೆ. ಅವರಿಗೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಬಗ್ಗೆ ಮಾಹಿತಿ ಇದೆ. ಅವರು ಕೂಡ ಅದರಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಅವರನ್ನು ಸಾಕ್ಷಿ ಅಥವಾ ಆರೋಪಿಯನ್ನಾಗಿಸಿ ವಿಚಾರಣೆ ಮಾಡಬಹುದು. ದಕ್ಷ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರ ಕಚೇರಿಗೆ ಲಕೋಟೆ ಕೊಟ್ಟು ಅವರಿಗೆ ವಿಷಯ ತಿಳಿಸಿದ್ದೇನೆ. ಅವರನ್ನೆಲ್ಲಾ ಈ ಹಿಂದೆ ಪೊಲೀಸರು, ಸಿಐಡಿ, ಸಿಬಿಐ ತನಿಖೆ ಮಾಡಿಲ್ಲ ಹಾಗಾಗಿ ಅವರ ತನಿಖೆ ಮಾಡಿದರೆ ಸತ್ಯ ಹೊರಬರುತ್ತೆ’ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More