AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆ ಬಗ್ಗೆ ವಿಶೇಷ ತನಿಖಾ ತಂಡದಿಂದ ಹೈವೋಲ್ಟೇಜ್ ಸಭೆ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆ ಬಗ್ಗೆ ವಿಶೇಷ ತನಿಖಾ ತಂಡದಿಂದ ಹೈವೋಲ್ಟೇಜ್ ಸಭೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 13, 2026 | 5:36 PM

Share

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಅವರು ಅಧಿಕಾರಿಗಳೊಂದಿಗೆ ಸುಮಾರು 3 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ಹಿಂದಿನ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಸಿಐಡಿ ವರದಿಗಳ ಪರಿಶೀಲನೆ ಹಾಗೂ ಮರುತನಿಖೆ ಎಲ್ಲಿಂದ ಆರಂಭಿಸಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಮಂಗಳೂರು, ಅಕ್ಟೋಬರ್​ 13: ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂರ್ ಮರು ತನಿಖೆ ಬಗ್ಗೆ ಮಂಗಳೂರಿನ SIT ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. SIT ಮುಖ್ಯಸ್ಥ ಶಶಿಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಬಿಐ ಮತ್ತು ಸಿಐಡಿ ಕೇಸ್ ಫೈಲ್ ಬಗ್ಗೆ ಮಾತುಕತೆ ನಡೆಸಲಾಗಿದೆ. ಸಾಕ್ಷಿಗಳ ಹೇಳಿಕೆ, ವೈದ್ಯಕೀಯ ವರದಿ, ಮರಣೋತ್ತರ ಪರೀಕ್ಷೆ ವರದಿ, ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಪರಿಶೀಲನೆ ಬಗ್ಗೆ ಚರ್ಚಿಸಲಾಗಿದೆ. ಈ ಹಿಂದೆ ತನಿಖಾಧಿಕಾರಿಗಳು ಯಾವ ಸಾಕ್ಷ್ಯಾಧಾರ ಸಂಗ್ರಹಿಸಿದ್ದರು, ಯಾವುದನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ ಎಂಬ ಬಗ್ಗೆ ಪರಿಶೀಲನೆ ನಡೆದಿದೆ. ಜೊತೆಗೆ ಹಳೆ ತನಿಖೆಯಲ್ಲಿ ಉಂಟಾಗಿರಬಹುದಾದ ಲೋಪಗಳ ಬಗ್ಗೆಯೂ ಮಾತುಕತೆ ನಡೆದಿದೆ. ಕೋರ್ಟ್​ನ ಹಳೆ ತೀರ್ಪು, ಸುಪ್ರೀಂಕೋರ್ಟ್ ನಿರ್ದೇಶನ ಅಧ್ಯಯನ, ತೀರ್ಪಿನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳ ಕೊರತೆ, ತನಿಖೆಯಲ್ಲಿ ಲೋಪ ಸಂಬಂಧ ವಿಚಾರಗಳ ಬಗ್ಗೆಯೂ ವಿಶೇಷ ತನಿಖಾ ತಂಡದ ಸಭೆಯಲ್ಲಿ ವಿಸ್ತೃತವಾಗಿ ಸಮಾಲೋಚನೆ ನಡೆಸಲಾಗಿದೆ. ಸೌಜನ್ಯ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರ ಆರಂಭಿಕ ತನಿಖೆಯಿಂದ ಸಿಬಿಐ ತನಿಖೆವರೆಗೆ ವಿಶ್ಲೇಷಣೆಗೆ SIT ಮುಖ್ಯಸ್ಥ ಶಶಿಕುಮಾರ್ ಈ ವೇಳೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 13, 2026 05:33 PM

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More