AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾಹಿತಿ, ದಾಖಲೆಗಳನ್ನು ನೀಡುವಂತೆ  ಸಿಬಿಐ-ಸಿಐಡಿಗೆ SIT ಪತ್ರ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾಹಿತಿ, ದಾಖಲೆಗಳನ್ನು ನೀಡುವಂತೆ ಸಿಬಿಐ-ಸಿಐಡಿಗೆ SIT ಪತ್ರ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 02, 2026 | 11:32 AM

Share

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಸಂಬಂಧ, ಎಸ್ಐಟಿ ಸಿಬಿಐ ಮತ್ತು ಸಿಐಡಿ ಗೆ ಪತ್ರ ಬರೆದಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾಗಿರುವ ಎಸ್ಐಟಿ, ಈ ಹಿಂದೆ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಬಿಐ ಮತ್ತು ಸಿಐಡಿ ಯಿಂದ ಮಾಹಿತಿ ಹಾಗೂ ದಾಖಲೆಗಳನ್ನು ಪಡೆದುಕೊಳ್ಳಲು ಮುಂದಾಗಿದೆ. ಇದು ಮರುತನಿಖೆಗೆ ಮಹತ್ವದ ಹೆಜ್ಜೆಯಾಗಿದೆ.

ಬೆಂಗಳೂರು, ಅಕ್ಟೋಬರ್​​ 02: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಸಂಬಂಧ ವಿಶೇಷ ತನಿಖಾ ದಳ (ಎಸ್ಐಟಿ) ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಕರಣದ ಕುರಿತಾದ ಮಾಹಿತಿ ಮತ್ತು ದಾಖಲೆಗಳನ್ನು ನೀಡುವಂತೆ ಎಸ್ಐಟಿ, ಕೇಂದ್ರ ತನಿಖಾ ದಳ (ಸಿಬಿಐ) ಹಾಗೂ ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ಪತ್ರ ಬರೆದಿದೆ. ಈ ಹಿಂದೆ ಸೌಜನ್ಯ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತು ಸಿಐಡಿ ಅಧಿಕಾರಿಗಳು ನಡೆಸಿದ್ದರು. ಆ ತನಿಖೆಗೆ ಸಂಬಂಧಿಸಿದಂತೆ ಲಭ್ಯವಿರುವ ಎಲ್ಲ ಮಾಹಿತಿ ಮತ್ತು ಸಾಕ್ಷ್ಯಾಧಾರಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಸ್ಐಟಿ ಈ ಪತ್ರ ಬರೆದಿದೆ. ಸುಪ್ರೀಂಕೋರ್ಟ್ ಇತ್ತೀಚಿಗಷ್ಟೇ ಸೌಜನ್ಯ ಪ್ರಕರಣದ ಮರುತನಿಖೆಗೆ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಎಸ್ಐಟಿ ರಚನೆಯಾಗಿದ್ದು, ತನಿಖೆಯನ್ನು ಪ್ರಾರಂಭಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More