AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ: ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ: ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ

ಸುನಿಲ್​ ಎಮ್​ ಹೆಚ್​
| Edited By: |

Updated on: Sep 30, 2026 | 12:23 PM

Share

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ರಚನೆಯಾದ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರು ಹಿಂದೆ ಸರಿದಿದ್ದಾರೆ. ಭ್ರಷ್ಟಾಚಾರ ಹಾಗೂ ಭೂಗತ ಪಾತಕಿಗಳ ಜೊತೆ ನಂಟಿನ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರರು ಮತ್ತು ಸೌಜನ್ಯ ಕುಟುಂಬ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಮುಜುಗರದಿಂದ ಅವರು ಸರ್ಕಾರಕ್ಕೆ ಪತ್ರ ಬರೆದು ತಂಡದಿಂದ ಕೈಬಿಡುವಂತೆ ಕೋರಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 30: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್ಪಿ) ವೆಂಕಟೇಶ್ ಪ್ರಸನ್ನ ಅವರು ಹೊರಬರಲು ನಿರ್ಧರಿಸಿದ್ದಾರೆ. ತಮ್ಮನ್ನು ತಂಡದಿಂದ ಕೈಬಿಡುವಂತೆ ಕೋರಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ಆದೇಶಿಸಿದಾಗ, ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದವರು ಹೊಸ ತಂಡದಲ್ಲಿ ಇರಬಾರದು ಎಂದು ಸೂಚಿಸಿತ್ತು. ಸೆಪ್ಟೆಂಬರ್ 24ರಂದು ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ಐವರ ತಂಡವನ್ನು ಸರ್ಕಾರ ರಚಿಸಿತ್ತು. ಈ ತಂಡದಲ್ಲಿ ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರ ಹೆಸರು ಇತ್ತು.

ಆದರೆ, ಸಾಮಾಜಿಕ ಹೋರಾಟಗಾರರು ಮತ್ತು ಸೌಜನ್ಯ ಕುಟುಂಬದವರು ಎಸ್‌ಐಟಿ ತಂಡದಲ್ಲಿ ವಿವಾದಿತ ಅಧಿಕಾರಿಗಳು ಇದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರ ಮೇಲೆ ಭ್ರಷ್ಟಾಚಾರ ಮತ್ತು ಭೂಗತ ಪಾತಕಿಗಳ ಜೊತೆ ನಂಟು ಹೊಂದಿರುವ ಗಂಭೀರ ಆರೋಪಗಳಿದ್ದು, ಅವರನ್ನು ತಂಡದಿಂದ ಕೈಬಿಡುವಂತೆ ಒತ್ತಾಯಿಸಲಾಗಿತ್ತು. ಈ ಆಕ್ಷೇಪಗಳ ಹಿನ್ನೆಲೆಯಲ್ಲಿ ಮುಜುಗರಕ್ಕೊಳಗಾದ ಎಎಸ್ಪಿ ವೆಂಕಟೇಶ್ ಪ್ರಸನ್ನ, ತನಿಖಾ ತಂಡದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುನಿಲ್​ ಎಮ್​ ಹೆಚ್​
ಸುನಿಲ್​ ಎಮ್​ ಹೆಚ್​