ಸೌಜನ್ಯ ಪ್ರಕರಣ ಮರುತನಿಖೆ: ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಎಸ್‌ಐಟಿ ಮುಖ್ಯಸ್ಥ

Edited By:

Updated on: Oct 28, 2026 | 11:51 AM

ಧರ್ಮಸ್ಥಳ ಸಮೀಪ ನಡೆದಿದ್ದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಯ ಪ್ರಗತಿ ಕುರಿತು ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ಹಿಂದೆ ತನಿಖೆ ನಡೆಸಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಮರಣೋತ್ತರ ಪರೀಕ್ಷೆ ನಡೆಸಿದ್ದ ಸಿಬ್ಬಂದಿಗೂ ಎಸ್‌ಐಟಿ ನೋಟಿಸ್ ನೀಡಿದೆ.

ಬೆಂಗಳೂರು, ಅಕ್ಟೋಬರ್ 28: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತನಿಖೆಯ ಪ್ರಗತಿ ಕುರಿತು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಬುಧವಾರ ಈ ಭೇಟಿ ನಡೆದಿದೆ. ಸೌಜನ್ಯ ಪ್ರಕರಣದ ಮರುತನಿಖೆ ಶಶಿಕುಮಾರ್ ನೇತೃತ್ವದ ತಂಡದಿಂದ ನಡೆಯುತ್ತಿದ್ದು, ಈವರೆಗೆ ಕೈಗೊಂಡಿರುವ ತನಿಖಾ ಕ್ರಮಗಳು ಮತ್ತು ಪ್ರಗತಿಯ ಬಗ್ಗೆ ಎಸ್‌ಐಟಿ ಮುಖ್ಯಸ್ಥರು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದ ಮರುತನಿಖೆಯ ಭಾಗವಾಗಿ ಎಸ್‌ಐಟಿ ಈಗಾಗಲೇ ಹಲವರಿಗೆ ನೋಟಿಸ್ ನೀಡಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಅಕ್ಟೋಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದ ಸಿಬ್ಬಂದಿಗೂ ಎಸ್‌ಐಟಿ ನೋಟಿಸ್ ನೀಡಿದೆ. ಹಿಂದಿನ ತನಿಖೆಯ ವೇಳೆ ಸಂಗ್ರಹಿಸಲಾದ ಮಾಹಿತಿ ಮತ್ತು ದಾಖಲೆಗಳ ಆಧಾರದಲ್ಲಿ ಮರುತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More