ಸೌಜನ್ಯ ಪ್ರಕರಣ ಮರು ತನಿಖೆ: ಪೊಲೀಸ್, ಸಿಐಡಿ, ಸಿಬಿಐ ಸೇರಿ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್‌ಐಟಿ ನೋಟಿಸ್
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಪೊಲೀಸ್, ಸಿಐಡಿ ಮತ್ತು ಸಿಬಿಐನಲ್ಲಿ ಪ್ರಕರಣ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಸಿಆರ್‌ಪಿಸಿ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಬೆಂಗಳೂರು, ಅಕ್ಟೋಬರ್ 27: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ತೀವ್ರಗೊಂಡಿದೆ. ಈ ಸಂಬಂಧ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಮುಖ ಬೆಳವಣಿಗೆಯೊಂದರಲ್ಲಿ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದೆ. 2012ರಲ್ಲಿ ನಡೆದ ಈ ಘಟನೆಯ ತನಿಖೆಯನ್ನು ಆರಂಭದಿಂದ ಅಂದರೆ ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಸಿಐಡಿ ಮತ್ತು ಸಿಬಿಐ ಹಂತದವರೆಗೂ ನಡೆಸಿದ ಎಲ್ಲ ಅಧಿಕಾರಿಗಳಿಗೆ ಸಮನ್ಸ್ ನೀಡಲಾಗಿದೆ. ಎಸ್‌ಐಟಿ ಈ ಅಧಿಕಾರಿಗಳನ್ನು ಸಿಆರ್‌ಪಿಸಿ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಶುಕ್ರವಾರವೇ ವಿಚಾರಣೆಗೆ ಹಾಜರಾಗಲು ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಮರು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹಿಂದೆ ಸಂಗ್ರಹಿಸಲಾದ ದಾಖಲೆಗಳು ಮತ್ತು ಮಾಹಿತಿಗಳ ಆಧಾರದ ಮೇಲೆ, ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದವರ ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಕಲೆಹಾಕಲು ಮುಂದಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

