ಸೌಜನ್ಯ ಪ್ರಕರಣ ಮರು ತನಿಖೆ: ಪೊಲೀಸ್, ಸಿಐಡಿ, ಸಿಬಿಐ ಸೇರಿ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್‌ಐಟಿ ನೋಟಿಸ್

Edited By:

Updated on: Oct 27, 2026 | 10:07 AM

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಪೊಲೀಸ್, ಸಿಐಡಿ ಮತ್ತು ಸಿಬಿಐನಲ್ಲಿ ಪ್ರಕರಣ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಸಿಆರ್‌ಪಿಸಿ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಬೆಂಗಳೂರು, ಅಕ್ಟೋಬರ್ 27: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ತೀವ್ರಗೊಂಡಿದೆ. ಈ ಸಂಬಂಧ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಮುಖ ಬೆಳವಣಿಗೆಯೊಂದರಲ್ಲಿ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದೆ. 2012ರಲ್ಲಿ ನಡೆದ ಈ ಘಟನೆಯ ತನಿಖೆಯನ್ನು ಆರಂಭದಿಂದ ಅಂದರೆ ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಸಿಐಡಿ ಮತ್ತು ಸಿಬಿಐ ಹಂತದವರೆಗೂ ನಡೆಸಿದ ಎಲ್ಲ ಅಧಿಕಾರಿಗಳಿಗೆ ಸಮನ್ಸ್ ನೀಡಲಾಗಿದೆ. ಎಸ್‌ಐಟಿ ಈ ಅಧಿಕಾರಿಗಳನ್ನು ಸಿಆರ್‌ಪಿಸಿ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಶುಕ್ರವಾರವೇ ವಿಚಾರಣೆಗೆ ಹಾಜರಾಗಲು ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ಮರು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹಿಂದೆ ಸಂಗ್ರಹಿಸಲಾದ ದಾಖಲೆಗಳು ಮತ್ತು ಮಾಹಿತಿಗಳ ಆಧಾರದ ಮೇಲೆ, ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದವರ ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಕಲೆಹಾಕಲು ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More