AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್​ ಆದೇಶದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪ್ರಿಯಾಂಕ್ ಖರ್ಗೆ

ಸೌಜನ್ಯ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್​ ಆದೇಶದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪ್ರಿಯಾಂಕ್ ಖರ್ಗೆ

ಈರಣ್ಣಾ ಬಸವಾ
| Edited By: |

Updated on: Sep 21, 2026 | 5:29 PM

Share

ಸೌಜನ್ಯ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ಅಧಿಕೃತ ಆದೇಶ ಇನ್ನೂ ಬಂದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿದ್ದರೂ, ನಿರ್ದಿಷ್ಟ ಆದೇಶಕ್ಕಾಗಿ ಕಾಯುತ್ತಿದ್ದು, ಅದು ಬಂದ ನಂತರ ಅಧಿಕಾರಿಗಳು ಮತ್ತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಹಿಂದೆ ಸಿಬಿಐ ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು, ಸೆ.21: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಅಧಿಕೃತ ಆದೇಶ ಇನ್ನೂ ಹೊರಬಂದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಾಧ್ಯಮಗಳಲ್ಲಿ ಮರು ತನಿಖೆಯ ಕುರಿತು ವರದಿಯಾಗಿದ್ದರೂ, ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇಂದು ಸಂಜೆಯೊಳಗೆ ಸುಪ್ರೀಂ ಕೋರ್ಟ್‌ನ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ. ಆದೇಶವನ್ನು ಪರಿಶೀಲಿಸಿದ ನಂತರ, ಅಧಿಕಾರಿಗಳೊಂದಿಗೆ ಚರ್ಚಿಸಿ, ಹಾಗೂಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸುಪ್ರೀಂ ಕೋರ್ಟ್‌ನ ಸೂಚನೆಗಳಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಹಿಂದೆ ಸೌಜನ್ಯ ಪ್ರಕರಣವನ್ನು ಸಿಐಡಿ ಮತ್ತು ನಂತರ ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆ ಕುರಿತಂತೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಅವರು ಉಲ್ಲೇಖಿಸಿದ್ದಾರೆ. ಈ ವಿಷಯವು ಬಹಳ ಸೂಕ್ಷ್ಮವಾಗಿರುವುದರಿಂದ, ಯಾವುದೇ ತಪ್ಪು ಸಂದೇಶ ರವಾನೆಯಾಗದಂತೆ ಅಧಿಕೃತ ಆದೇಶಕ್ಕಾಗಿ ಕಾಯುವುದು ಸೂಕ್ತ ಎಂದು ಖರ್ಗೆ ಹೇಳಿದರು. ಇಂದು ಸಂಜೆ 6:30-7:00 ಗಂಟೆಗೆ ಆದೇಶ ಬರಬಹುದು ಎಂದು ನಿರೀಕ್ಷಿಸಲಾಗಿದೆ. ಆದೇಶದ ಸಂಪೂರ್ಣ ವಿವರಗಳನ್ನು ಪರಿಶೀಲಿಸಿದ ನಂತರವೇ ಪ್ರತಿಕ್ರಿಯಿಸುವುದಾಗಿ ಅವರು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More