AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ, ಸಾಕ್ಷಿಗಳ ವಿಚಾರಣೆ

ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ, ಸಾಕ್ಷಿಗಳ ವಿಚಾರಣೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Oct 21, 2026 | 2:00 PM

Share

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ಎಸ್​ಐಟಿ ಮುಂದುವರಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಅಧಿಕೃತವಾಗಿ ಇನ್ನೆರಡು ದಿನದಲ್ಲಿ ಎಸ್​ಐಟಿ ತಂಡ ಕ್ಷೇತ್ರ ತನಿಖೆಗೆ ಇಳಿಯಲಿದೆ. ಈಗಾಗಲೇ ಸಿಬಿಐ, ಸ್ಥಳೀಯ ಪೊಲೀಸ್ ಮತ್ತು ನ್ಯಾಯಾಲಯದ ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರು, ಪಿಎಸ್​ಐ ಮತ್ತು ಸಿಬ್ಬಂದಿಯನ್ನು ವಿಚಾರಣೆ ನಡೆಸಲಿದೆ.

ಮಂಗಳೂರು, ಅಕ್ಟೋಬರ್ 21: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಪ್ರಕ್ರಿಯೆಯನ್ನು ವಿಶೇಷ ತನಿಖಾ ದಳ (ಎಸ್​ಐಟಿ) ತೀವ್ರಗೊಳಿಸಿದೆ. ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 21ರಂದು ಮರುತನಿಖೆಗೆ ನಿರ್ದೇಶನ ನೀಡಿದ ನಂತರ ಈ ಪ್ರಕರಣ ವಿಜಯದಶಮಿಯ ಸಂದರ್ಭದಲ್ಲೇ ಮಹತ್ವ ಪಡೆದುಕೊಂಡಿದೆ. ಇದೀಗ ಎಸ್​ಐಟಿ ತಂಡ ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಕ್ಷೇತ್ರ ತನಿಖೆ ಆರಂಭಿಸಲು ಸಿದ್ಧತೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳ ಪರಿಶೀಲನೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಸಿಬಿಐ, ನ್ಯಾಯಾಲಯ ಮತ್ತು ಸ್ಥಳೀಯ ಠಾಣೆಗಳಿಂದ ಪಡೆದ ತನಿಖಾ ವರದಿಗಳು ಮತ್ತು ದಾಖಲೆಗಳನ್ನು ಎಸ್​ಐಟಿ ಸಂಪೂರ್ಣವಾಗಿ ಪರಿಶೀಲಿಸಿದೆ.

ಐಪಿಎಸ್ ಅಧಿಕಾರಿ ಲೋಕೇಶ್ ಜಗಲಾಸರ್ ನೇತೃತ್ವದ ಈ ತಂಡವು ಮುಂದಿನ ಹಂತದಲ್ಲಿ ಅಪರಾಧ ಸ್ಥಳಕ್ಕೆ ಭೇಟಿ ನೀಡಲಿದೆ. ಇದರ ಜೊತೆಗೆ ಸೌಜನ್ಯ ಕುಟುಂಬದ ಸದಸ್ಯರು, ಪಿಎಸ್​ಐ ಹಾಗೂ ಇತರೆ ಸಿಬ್ಬಂದಿಯ ವಿಚಾರಣೆ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮರುತನಿಖೆಯ ಆದೇಶದಂತೆ, ಎಸ್​ಐಟಿ ತಂಡವು ಇನ್ನೆರಡು ದಿನಗಳಲ್ಲಿ ಸಕ್ರಿಯವಾಗಿ ಕಣಕ್ಕಿಳಿಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More