AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ

ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ

ರಾಜೇಶ್ ದುಗ್ಗುಮನೆ
|

Updated on: Sep 14, 2026 | 4:29 PM

Share

ಬಿಗ್ ಬಾಸ್ ಮನೆಯಲ್ಲಿ ಜಗಳಗಳು ತುಂಬಾನೇ ಸಾಮಾನ್ಯ. ಆದರೆ, ಕೆಲವು ಜಗಳಗಳು ಮಿತಿ ಮೀರುತ್ತವೆ. ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಗಿ ನಿಲ್ಲುತ್ತದೆ. ಈಗ ಬಿಗ್ ಬಾಸ್ ಮನೆಯಲ್ಲಿ ಸೌಂದರ್ಯಾ ಹಾಗೂ ಮಂಜು ಜಗಳ ಅದೇ ರೀತಿ ಆಗಿದೆ. ಇಬ್ಬರೂ ಮಿತಿ ಮೀರಿ ಕಿತ್ತಾಡಿಕೊಂಡಿದ್ದಾರೆ. ಕೈ ಕೈ ಮಿಲಾಯಿಸಿಕೊಳ್ಳುವುದು ಮಾತ್ರ ಬಾಕಿ ಇತ್ತು.

‘ಬಿಗ್ ಬಾಸ್ ಕನ್ನಡ ಸೀಸನ್ 13’ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸ್ಪರ್ಧಿಗಳ ಮಧ್ಯೆ ಕಿತ್ತಾಟ ಜೋರಾಗಿದೆ. ಟಾಸ್ಕ್ ಆಡುವಾಗ ಸೌಂದರ್ಯಾ ಹಾಗೂ ಮಂಜು ನಡುವೆ ದೊಡ್ಡ ಮಟ್ಟದ ಕಿತ್ತಾಟವೇ ನಡೆದಿದೆ. ಇದು ಯಾವ ಹಂತಕ್ಕೆ ಹೋಗಿತ್ತು ಎಂದರೆ ಇಬ್ಬರೂ ಹೊಡೆದಾಡಿಕೊಳ್ಳುವುದು ಮಾತ್ರ ಬಾಕಿ ಇತ್ತು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇವರೇನಾದರೂ ಕೈ ಕೈ ಮಿಲಾಯಿಸಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಎಪಿಸೋಡ್​ನಲ್ಲಿ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More