ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಸೌತ್ ಆಫ್ರಿಕಾ ತಂಡಕ್ಕೆ 10 ಓವರ್ಗಳಲ್ಲಿ 125 ರನ್ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ ಪಡೆ 10 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಿದ್ದರು. ಇದಾಗ್ಯೂ ಡಿಎಲ್ಎಸ್ ನಿಯಮದ ಪ್ರಕಾರ 6 ರನ್ಗಳಿಂದ ಹಿಂದೆ ಉಳಿದಿದ್ದರಿಂದ ವೆಸ್ಟ್ ಇಂಡೀಸ್ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.
ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್ಗಳಲ್ಲಿ ಕಲೆಹಾಕಿದ್ದು 114 ರನ್ಗಳು ಮಾತ್ರ.
ಆದರೆ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್ಗಳಲ್ಲಿ 125 ರನ್ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ ಪಡೆ 10 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಿದ್ದರು. ಇದಾಗ್ಯೂ ಡಿಎಲ್ಎಸ್ ನಿಯಮದ ಪ್ರಕಾರ 6 ರನ್ಗಳಿಂದ ಹಿಂದೆ ಉಳಿದಿದ್ದರಿಂದ ವೆಸ್ಟ್ ಇಂಡೀಸ್ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.
ಈ ಸೋಲಿನ ಹೊರತಾಗಿಯೂ ಮೂರು ಪಂದ್ಯಗಳ ಈ ಟಿ20 ಸರಣಿಯನ್ನು ಸೌತ್ ಆಫ್ರಿಕಾ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

