ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

Updated on: Feb 01, 2026 | 1:24 PM

ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ ಪಡೆ 10 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಿದ್ದರು. ಇದಾಗ್ಯೂ ಡಿಎಲ್​ಎಸ್ ನಿಯಮದ ಪ್ರಕಾರ 6 ರನ್​ಗಳಿಂದ ಹಿಂದೆ ಉಳಿದಿದ್ದರಿಂದ ವೆಸ್ಟ್ ಇಂಡೀಸ್ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್​ಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ.

ಆದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ ಪಡೆ 10 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಿದ್ದರು. ಇದಾಗ್ಯೂ ಡಿಎಲ್​ಎಸ್ ನಿಯಮದ ಪ್ರಕಾರ 6 ರನ್​ಗಳಿಂದ ಹಿಂದೆ ಉಳಿದಿದ್ದರಿಂದ ವೆಸ್ಟ್ ಇಂಡೀಸ್ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

ಈ ಸೋಲಿನ ಹೊರತಾಗಿಯೂ ಮೂರು ಪಂದ್ಯಗಳ ಈ ಟಿ20 ಸರಣಿಯನ್ನು ಸೌತ್ ಆಫ್ರಿಕಾ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More