ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು; ವಿಡಿಯೋ
WTC 2025 final: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಲಾರ್ಡ್ಸ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದಿದೆ. ಟೆಂಬಾ ಬವುಮಾ ನಾಯಕತ್ವದಲ್ಲಿ, 27 ವರ್ಷಗಳ ನಂತರ ಐಸಿಸಿ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಗೆಲುವು ಸಾಧಿಸಿದೆ. ಈ ಗೆಲುವು ದಕ್ಷಿಣ ಆಫ್ರಿಕಾ ಕ್ರಿಕೆಟ್‌ಗೆ ಐತಿಹಾಸಿಕ ಸಾಧನೆಯಾಗಿದೆ.
ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಟೆಂಬಾ ಬವುಮಾ ನಾಯಕತ್ವದಲ್ಲಿ, ದಕ್ಷಿಣ ಆಫ್ರಿಕಾ ತಂಡವು ಲಾರ್ಡ್ಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಗಾಗಿ ದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿತು. ಈ ಗೆಲುವಿನೊಂದಿಗೆ, ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ವಿಶ್ವ ಚಾಂಪಿಯನ್‌ಶಿಪ್ ಗೆದ್ದಿದ್ದು ಮಾತ್ರವಲ್ಲದೆ 27 ವರ್ಷಗಳ ನಂತರ ಐಸಿಸಿ ಟೂರ್ನಿಯ ಪ್ರಶಸ್ತಿ ಗೆದ್ದ ದಾಖಲೆಯನ್ನು ಬರೆಯಿತು. ಇದಕ್ಕೂ ಮೊದಲು 1998 ರಲ್ಲಿ ಐಸಿಸಿ ನಾಕೌಟ್ ಟ್ರೋಫಿಯನ್ನು ಗೆಲ್ಲುವಲ್ಲಿ ಆಫ್ರಿಕಾ ಯಶಸ್ವಿಯಾಗಿತ್ತು.
Published on: Jun 14, 2025 10:09 PM
Latest Videos

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
