Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ

Updated on: Dec 29, 2024 | 8:32 AM

ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಇದುವರೆಗೆ 47 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕೊರಿಯಾದ ನಗರವಾದ ಮುವಾನ್‌ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಭಾನುವಾರ ಜೆಜು ಏರ್ ವಿಮಾನವು ಲ್ಯಾಂಡಿಂಗ್ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ. ವಿಮಾನವು ಬ್ಯಾಂಕಾಕ್‌ನಿಂದ ಹಿಂತಿರುಗುತ್ತಿತ್ತು. ಬೋಯಿಂಗ್ 737-800 ವಿಮಾನದಲ್ಲಿದ್ದ ಪ್ರಯಾಣಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ವಾರ ಕಜಾಕಿಸ್ತಾನದ ಅಕ್ಟೌ ಬಳಿ ಸಂಭವಿಸಿದ ಅಜೆರ್‌ಬೈಜಾನ್ ಏರ್‌ಲೈನ್ ವಿಮಾನ ಅಪಘಾತದ ಬೆನ್ನಲ್ಲೇ ಈ ಸುದ್ದಿ ಕೇಳಿಬಂದಿದೆ. ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 175 ಪ್ರಯಾಣಿಕರು ಮತ್ತು 6 ಸಿಬ್ಬಂದಿ ವಿಮಾನದಲ್ಲಿದ್ದರು.

ರಕ್ಷಣಾ ಮತ್ತು ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸುತ್ತಿದೆ. ವಿಮಾನವು ಥೈಲ್ಯಾಂಡ್‌ನಿಂದ ಹಿಂತಿರುಗುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ಅಪಘಾತ ಸಂಭವಿಸಿದೆ.ಮುವಾನ್ ವಿಮಾನ ನಿಲ್ದಾಣ ನೀಡಿರುವ ಮಾಹಿತಿಯಲ್ಲಿ ಬೆಂಕಿ ನಂದಿಸುವ ಕಾರ್ಯ ಪೂರ್ಣಗೊಂಡಿದೆ.ಈ ಅವಘಡದಲ್ಲಿ ಗಾಯಗೊಂಡಿರುವ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More