AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಮೂಲದ ಕಂಪನಿಯ ಘಟಕ ಕಾರ್ಯಾರಂಭ: 350 ಜನರಿಗೆ ಉದ್ಯೋಗ

ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಮೂಲದ ಕಂಪನಿಯ ಘಟಕ ಕಾರ್ಯಾರಂಭ: 350 ಜನರಿಗೆ ಉದ್ಯೋಗ

ಗಣಪತಿ ಶರ್ಮಾ
|

Updated on: Aug 28, 2026 | 7:03 AM

Share

ದೇವನಹಳ್ಳಿಯ ಕುಂದಾಣ ಕೈಗಾರಿಕಾ ಪ್ರದೇಶದಲ್ಲಿ ದಕ್ಷಿಣ ಕೊರಿಯಾ ಮೂಲದ ಡಿ.ಎನ್. ಸೊಲ್ಯೂಷನ್ಸ್ ಕಂಪನಿಯ ₹600 ಕೋಟಿ ವೆಚ್ಚದ ನೂತನ ಉತ್ಪಾದನಾ ಹಾಗೂ ಆರ್&ಡಿ ಘಟಕವನ್ನು ಸಚಿವ ಎಂ.ಬಿ. ಪಾಟೀಲ್ ಉದ್ಘಾಟಿಸಿದರು. ಈ ಘಟಕವು 350 ಜನರಿಗೆ ಉದ್ಯೋಗ ನೀಡಲಿದ್ದು, ರಾಜ್ಯದ ಉತ್ಪಾದನಾ ವಲಯಕ್ಕೆ ಮತ್ತಷ್ಟು ಬಲ ತುಂಬಲಿದೆ.

ಬೆಂಗಳೂರು, ಆಗಸ್ಟ್ 28: ದಕ್ಷಿಣ ಕೊರಿಯಾ ಮೂಲದ ಮೆಷಿನ್ ಟೂಲ್ಸ್ ತಯಾರಿಕಾ ದೈತ್ಯ ಕಂಪನಿ ಡಿಎನ್ ಸೊಲ್ಯೂಷನ್ಸ್ ನೂತನ ಉತ್ಪಾದನಾ ಮತ್ತು ಆರ್&ಡಿ ಘಟಕವನ್ನು ದೇವನಹಳ್ಳಿಯ ಕುಂದಾಣ ಕೈಗಾರಿಕಾ ಪ್ರದೇಶದಲ್ಲಿ ಪ್ರಾರಂಭಿಸಿದೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಈ ಘಟಕವನ್ನು ಉದ್ಘಾಟಿಸಿದರು. ಸುಮಾರು ₹600 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ಬೃಹತ್ ಯೋಜನೆ ಕೇವಲ ಎರಡು ವರ್ಷಗಳಲ್ಲಿ ಕಾರ್ಯರೂಪಕ್ಕೆ ಬಂದಿದೆ. ಸದ್ಯಕ್ಕೆ ಇದು 350 ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ದೇಶದ ಮೆಷಿನ್ ಟೂಲ್ಸ್ ತಯಾರಿಕೆಯಲ್ಲಿ ಕರ್ನಾಟಕವು ಶೇಕಡಾ 52ರಷ್ಟು ಕೊಡುಗೆ ನೀಡುತ್ತಿದ್ದು, ಈ ಹೂಡಿಕೆಯಿಂದ ಉತ್ಪಾದನಾ ವಲಯಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಸಚಿವರು ಸಂತೋಷ ವ್ಯಕ್ತಪಡಿಸಿದರು. ಕಂಪನಿಯು ತನ್ನ ಜಾಗತಿಕ ಪೂರೈಕೆಯನ್ನು ಇಲ್ಲಿಂದಲೇ ನಿರ್ವಹಿಸಬೇಕು ಹಾಗೂ ಸ್ಥಳೀಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳೊಂದಿಗೆ ಕೈಜೋಡಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಡಿ.ಎನ್. ಸೊಲ್ಯೂಷನ್ಸ್ ಕಂಪನಿಯ ಅಧ್ಯಕ್ಷ ವೊನ್ ಜಾಂಗ್ ಕಿಮ್ ಅವರು, 2035ರ ವೇಳೆಗೆ ಮೆಷಿನ್ ಟೂಲ್ಸ್ ಉತ್ಪಾದನೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೇರುವ ಗುರಿ ಹೊಂದಿರುವುದಾಗಿ ತಿಳಿಸಿದರು. ಈ ಯೋಜನೆಯು ಕರ್ನಾಟಕದ ಕೈಗಾರಿಕಾ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More