ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: ಎಸ್ಐಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ
ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳ ನೋಟಿಸ್ ಹಿನ್ನೆಲೆ ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಿ, ತನಿಖೆಗೆ ಪೂರಕವಾದ ದಾಖಲೆಗಳು ಮತ್ತು ಪೆನ್ ಡ್ರೈವ್ ಹಸ್ತಾಂತರಿಸಿದ್ದಾರೆ. ತನಿಖೆಗೆ ಎಲ್ಲ ಸಹಕಾರ ನೀಡುವುದಾಗಿ ವಿಚಾರಣೆ ಬಳಿಕ ಮಾಧ್ಯಮಗಳಿಗೆ ತಿಮರೋಡಿ ತಿಳಿಸಿದ್ದಾರೆ.
ಮಂಗಳೂರು, ನವೆಂಬರ್ 26: ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಹಾಜರಾಗಿದ್ದಾರೆ. SIT ಅಧಿಕಾರಿಗಳ ನೋಟಿಸ್ ಹಿನ್ನೆಲೆ ಕೆಲ ದಾಖಲೆಗಳೊಂದಿಗೆ ಮಹೇಶ್ ಶೆಟ್ಟಿ ಆಗಮಿಸಿದ್ದರು. ವಿಚಾರಣೆ ಬಳಿಕ ಮಾತನಾಡಿದ ಅವರು, ತನಿಖೆ ನಡೆಯುತ್ತಿರುವ ಕಾರಣ ಏನು ಕೊಟ್ಟಿದ್ದೇವೆ ಮತ್ತು ಅವರೇನು ಕೇಳಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ತನಿಖೆಗೆ ಸಂಬಂಧಿಸಿದಂತೆ ದಾಖಲೆ, ಪೆನ್ ಡ್ರೈವ್ ಅಧಿಕಾರಿಗಳಿಗೆ ಕೊಟ್ಟಿದ್ದೇವೆ . ಸೌಜನ್ಯ ಪ್ರಕರಣ ಆಗಿ 14 ವರ್ಷ ಆಗಿದೆ. ಅದರ ತನಿಖೆಯನ್ನು ಮೂರು ತಿಂಗಳಲ್ಲಿ ಮುಗಿಸುವುದು ಹೇಗೆ? ಕೋರ್ಟ್ ಹೇಳಿರುವ ಕಾರಣ ಅದಕ್ಕೆ ಪೂರಕ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಎಲ್ಲ ಸಹಕಾರ ನೀಡುವುದಾಗಿ ತಿಮರೋಡಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

