ಸೌಜನ್ಯ ಅತ್ಯಾಚಾರ, ಕೊಲೆ ಕೇಸ್​​: ಎಸ್​ಐಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Edited By:

Updated on: Nov 26, 2026 | 2:18 PM

ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳ ನೋಟಿಸ್ ಹಿನ್ನೆಲೆ ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಿ, ತನಿಖೆಗೆ ಪೂರಕವಾದ ದಾಖಲೆಗಳು ಮತ್ತು ಪೆನ್ ಡ್ರೈವ್ ಹಸ್ತಾಂತರಿಸಿದ್ದಾರೆ. ತನಿಖೆಗೆ ಎಲ್ಲ ಸಹಕಾರ ನೀಡುವುದಾಗಿ ವಿಚಾರಣೆ ಬಳಿಕ ಮಾಧ್ಯಮಗಳಿಗೆ ತಿಮರೋಡಿ ತಿಳಿಸಿದ್ದಾರೆ.

ಮಂಗಳೂರು, ನವೆಂಬರ್​​ 26: ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಎಸ್​ಐಟಿ ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಹಾಜರಾಗಿದ್ದಾರೆ. SIT ಅಧಿಕಾರಿಗಳ ನೋಟಿಸ್​​ ಹಿನ್ನೆಲೆ ಕೆಲ ದಾಖಲೆಗಳೊಂದಿಗೆ ಮಹೇಶ್ ಶೆಟ್ಟಿ ಆಗಮಿಸಿದ್ದರು. ವಿಚಾರಣೆ ಬಳಿಕ ಮಾತನಾಡಿದ ಅವರು, ತನಿಖೆ ನಡೆಯುತ್ತಿರುವ ಕಾರಣ ಏನು ಕೊಟ್ಟಿದ್ದೇವೆ ಮತ್ತು ಅವರೇನು ಕೇಳಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ತನಿಖೆಗೆ ಸಂಬಂಧಿಸಿದಂತೆ ದಾಖಲೆ, ಪೆನ್ ಡ್ರೈವ್ ಅಧಿಕಾರಿಗಳಿಗೆ ಕೊಟ್ಟಿದ್ದೇವೆ . ಸೌಜನ್ಯ ಪ್ರಕರಣ ಆಗಿ 14 ವರ್ಷ ಆಗಿದೆ. ಅದರ ತನಿಖೆಯನ್ನು ಮೂರು ತಿಂಗಳಲ್ಲಿ ಮುಗಿಸುವುದು ಹೇಗೆ? ಕೋರ್ಟ್ ಹೇಳಿರುವ ಕಾರಣ ಅದಕ್ಕೆ ಪೂರಕ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಎಲ್ಲ ಸಹಕಾರ ನೀಡುವುದಾಗಿ ತಿಮರೋಡಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More