ಸೌಜನ್ಯ ಕೇಸ್: ಮಹೇಶ್ ಶೆಟ್ಟಿ ತಿಮರೋಡಿ, ವಿಟ್ಠಲ್ ಗೌಡ ವಿರುದ್ದ ಎಸ್ಐಟಿಗೆ ದೂರು
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸಂತೋಷ್ ರಾವ್ ಬಿಡುಗಡೆಗೆ ನೆರವಾಗಿರುವ ಮತ್ತು ನ್ಯಾಯಾಂಗ ಹಾಗೂ ವಕೀಲರ ವಿರುದ್ಧ ಸಾರ್ವಜನಿಕವಾಗಿ ಆರೋಪ ಮಾಡಿರುವ ಆರೋಪ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ವಿಟ್ಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ವಕೀಲ ಅಮೃತೇಶ್ ಎಸ್ಐಟಿಗೆ ದೂರು ನೀಡಿದ್ದಾರೆ.
ಮಂಗಳೂರು, ನವೆಂಬರ್ 06: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ವಿಟ್ಠಲ್ ಗೌಡ ವಿರುದ್ದ ಹೈಕೋರ್ಟ್ ವಕೀಲ ಅಮೃತೇಶ್ ಎಸ್ಐಟಿಗೆ ದೂರು ನೀಡಿದ್ದಾರೆ. ಪ್ರಕರಣದಲ್ಲಿ ಸಂತೋಷ್ ರಾವ್ ಬಿಡುಗಡೆಗೆ ಅನುಕೂಲ ಮಾಡಿಕೊಡಲಾಗಿದೆ. ಸಾರ್ವಜನಿಕ ಅಭಿಯೋಜಕರು, ಗೌರವಾನ್ವಿತ ನ್ಯಾಯಾಧೀಶರು ಹಾಗೂ ಇತರ ವಕೀಲರಿಗೆ ಹಣ ಪಾವತಿಸಲಾಗಿದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವ ಮಹೇಶ್ ಶೆಟ್ಟಿ ಮತ್ತು ವಿಟ್ಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ಅವರು ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 06, 2026 03:32 PM
Follow Us

