ಸೌಜನ್ಯ ಕೇಸ್​​: ಮಹೇಶ್ ಶೆಟ್ಟಿ ತಿಮರೋಡಿ, ವಿಟ್ಠಲ್ ಗೌಡ ವಿರುದ್ದ ಎಸ್​​ಐಟಿಗೆ ದೂರು

Edited By:

Updated on: Nov 06, 2026 | 3:33 PM

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸಂತೋಷ್ ರಾವ್ ಬಿಡುಗಡೆಗೆ ನೆರವಾಗಿರುವ ಮತ್ತು ನ್ಯಾಯಾಂಗ ಹಾಗೂ ವಕೀಲರ ವಿರುದ್ಧ ಸಾರ್ವಜನಿಕವಾಗಿ ಆರೋಪ ಮಾಡಿರುವ ಆರೋಪ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ವಿಟ್ಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ವಕೀಲ ಅಮೃತೇಶ್ ಎಸ್‌ಐಟಿಗೆ ದೂರು ನೀಡಿದ್ದಾರೆ.

ಮಂಗಳೂರು, ನವೆಂಬರ್​​ 06: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ವಿಟ್ಠಲ್ ಗೌಡ ವಿರುದ್ದ ಹೈಕೋರ್ಟ್ ವಕೀಲ ಅಮೃತೇಶ್ ಎಸ್ಐಟಿಗೆ ದೂರು ನೀಡಿದ್ದಾರೆ. ಪ್ರಕರಣದಲ್ಲಿ ಸಂತೋಷ್ ರಾವ್ ಬಿಡುಗಡೆಗೆ ಅನುಕೂಲ ಮಾಡಿಕೊಡಲಾಗಿದೆ. ಸಾರ್ವಜನಿಕ ಅಭಿಯೋಜಕರು, ಗೌರವಾನ್ವಿತ ನ್ಯಾಯಾಧೀಶರು ಹಾಗೂ ಇತರ ವಕೀಲರಿಗೆ ಹಣ ಪಾವತಿಸಲಾಗಿದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವ ಮಹೇಶ್ ಶೆಟ್ಟಿ ಮತ್ತು ವಿಟ್ಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 06, 2026 03:32 PM
Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More