‘ಆ ಪ್ರಶ್ನೆಗಳಿಗೆ ದಿಟ್ಟ ಉತ್ತರ ಸಿಗಲ್ಲ’: ಸ್ಪಂದನಾ ವಿಜಯ್ ರಾಘವೇಂದ್ರ ನಿಧನಕ್ಕೆ ರಮೇಶ್ ಅರವಿಂದ್ ಪ್ರತಿಕ್ರಿಯೆ
‘ವಿಜಯ್ ರಾಘವೇಂದ್ರ ಅವರಿಗೆ ದೊಡ್ಡ ಶೂನ್ಯ ಆವರಿಸಿಕೊಳ್ಳುತ್ತದೆ. ಅದರಿಂದ ಪಾರಾಗುವ ಶಕ್ತಿಯು ಅವರಿಗೆ ಸಿಗಲಿ. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಮೇಶ್ ಅರವಿಂದ್ ಅವರು ಸಾಂತ್ವನದ ನುಡಿಗಳನ್ನು ತಿಳಿಸಿದ್ದಾರೆ.
ಸ್ಪಂದನಾ ವಿಜಯ್ ರಾಘವೇಂದ್ರ (Spandana Vijay Raghavendra) ಅವರ ನಿಧನದ ಸುದ್ದಿ ಕನ್ನಡ ಚಿತ್ರರಂಗಕ್ಕೆ ಆಘಾತ ತಂದಿದೆ. ಅನೇಕ ಸೆಲೆಬ್ರಿಟಿಗಳು ಸ್ಪಂದನಾ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ಅವರಿಗೆ ಸಾಂತ್ವನ ಹೇಳಲಾಗುತ್ತಿದೆ. ರಮೇಶ್ ಅರವಿಂದ್ ಕೂಡ ತಮ್ಮ ಸಾಂತ್ವನದ ನುಡಿಗಳನ್ನು ತಿಳಿಸಿದ್ದಾರೆ. ‘ಈ ಸುದ್ದಿ ಕೇಳಿ ಶಾಕಿಂಗ್ ಎನಿಸಿತು. ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರನ್ನು ಜೋಡಿಯಾಗಿ ನೋಡಿದಾಗ ಬಹಳ ಖುಷಿ ಆಗುತ್ತಿತ್ತು. ಒಬ್ಬರಿಗೊಬ್ಬರು ಸಪೋರ್ಟ್ ಮಾಡುತ್ತಿದ್ದರು. ಆ ರೀತಿ ಇದ್ದಂತಹ ಹುಡುಗಿಗೆ ದಿಢೀರ್ ಅಂತ ಈ ವಯಸ್ಸಿನಲ್ಲಿ ಯಾಕೆ ಹೀಗಾಯಿತು ಎಂಬ ಪ್ರಶ್ನೆ ನಮ್ಮ ಮನಸ್ಸಿನಲ್ಲಿ ಮೂಡುತ್ತದೆ. ಆದರೆ ಆ ರೀತಿಯ ಪ್ರಶ್ನೆಗಳಿಗೆ ಉತ್ತರ ಸಿಗುವುದಿಲ್ಲ. ಇದು ಬಹಳ ದುಃಖದ ವಿಚಾರ. ಯಾರಿಗೂ ಹೀಗೆ ಆಗಬಾರದು’ ಎಂದು ರಮೇಶ್ ಅರವಿಂದ್ (Ramesh Aravind) ಅವರು ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos