ಸ್ಪಂದನಾ ವಿಜಯ್​ ರಾಘವೇಂದ್ರ ಉತ್ತರ ಕ್ರಿಯೆ: ಆಗಸ್ಟ್​ 16ರಂದು ಶಾಂತಿಹೋಮ, ಭೋಜನ ವ್ಯವಸ್ಥೆ

Updated on: Aug 13, 2023 | 10:30 AM

ವಿಜಯ್​ ರಾಘವೇಂದ್ರ ಕುಟುಂಬದವರು ಸ್ಪಂದನಾ ಅವರ ಉತ್ತರ ಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮಲ್ಲೇಶ್ವರದ ನಿವಾಸದಲ್ಲಿ ಆಗಸ್ಟ್​ 16ರಂದು ಬೆಳಗ್ಗೆ 8 ಗಂಟೆಗೆ ಶಾಂತಿಹೋಮ ನಡೆಯಲಿದೆ. ಅದೇ ದಿನ ಮಧ್ಯಾಹ್ನ 1 ಗಂಟೆಯಿಂದ ಕೋದಂಡರಾಮಪುರದ ಯಂಗ್​ಸ್ಟರ್ಸ್​ ಕಬಡ್ಡಿ ಆಟದ ಮೈದಾನದಲ್ಲಿ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.

ಸ್ಯಾಂಡಲ್​ವುಡ್​ ನಟ ವಿಜಯ್​ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ನಿಧನದಿಂದ ಅವರ ಕುಟುಂಬದಲ್ಲಿ ದುಃಖದ ವಾತಾವರಣ ನಿರ್ಮಾಣ ಆಗಿದೆ. ಆಗಸ್ಟ್​ 6ರಂದು ಸ್ಪಂದನಾ ವಿಜಯ್​ ರಾಘವೇಂದ್ರ (Spandana Vijay Raghavendra) ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಆಗಸ್ಟ್​ 9ರಂದು ಅಂತ್ಯ ಸಂಸ್ಕಾರ ನೆರವೇರಿತು. ಈಗ ಉತ್ತರ ಕ್ರಿಯೆಗೆ ಬಿ.ಕೆ. ಶಿವರಾಂ (BK Shivaram) ಹಾಗೂ ಎಸ್​.ಎ. ಚಿನ್ನೇಗೌಡ ಕುಟುಂಬದವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆಗಸ್ಟ್​ 16ರಂದು ಮಲ್ಲೇಶ್ವರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಯಿಂದ ಶಾಂತಿಹೋಮ ನಡೆಯಲಿದೆ. ಮಧ್ಯಾಹ್ನ ಒಂದು ಗಂಟೆಯಿಂದ ಕೋದಂಡರಾಮಪುರದ ಯಂಗ್​ಸ್ಟರ್ಸ್​ ಕಬಡ್ಡಿ ಆಟದ ಮೈದಾನದಲ್ಲಿ ಭೋಜನ ವ್ಯವಸ್ಥೆ ಮಾಡಲಾಗುತ್ತದೆ. ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಆತ್ಮಕ್ಕೆ ಎಲ್ಲರೂ ಶಾಂತಿ ಕೋರುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More