‘ಸ್ಪಂದನಾಗೆ ಬಹಳ ಬೇಗ ಕೋಪ ಬರುತ್ತಿತ್ತು’: ಕಾರಣ ತಿಳಿಸಿದ ವಿಜಯ್​ ರಾಘವೇಂದ್ರ

Updated on: Aug 31, 2023 | 7:47 PM

ಪತ್ನಿ ಸ್ಪಂದನಾ ಬಗೆಗಿನ ನೆನಪುಗಳನ್ನು ವಿಜಯ್​ ರಾಘವೇಂದ್ರ ಮೆಲುಕು ಹಾಕಿದ್ದಾರೆ. ತಮಗಿಂತಲೂ ಸ್ಪಂದನಾಗೆ ಕೋಪ ಜಾಸ್ತಿ ಇತ್ತು ಎಂದು ಅವರು ಹೇಳಿದ್ದಾರೆ. ಪತ್ನಿಯ ಕೋಪಕ್ಕೆ ಕಾರಣ ಆಗುತ್ತಿದ್ದ ಸಂಗತಿಗಳು ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ‘ಕದ್ದ ಚಿತ್ರ’ ಬಿಡುಗಡೆ ಸಲುವಾಗಿ ಅವರು ನೀಡಿದ ಸಂದರ್ಶನದ ತುಣುಕು ಇಲ್ಲಿದೆ...

ಸ್ಪಂದನಾ ವಿಜಯ್​ ರಾಘವೇಂದ್ರ (Spandana Vijay Raghavendra) ಅವರು ಹೃದಯಾಘಾತದಿಂದ ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಸ್ಪಂದನಾ ಇಲ್ಲದೇ ವಿಜಯ್​ ರಾಘವೇಂದ್ರ ಅವರು ಮಂಕಾದರು. ಆದರೆ ಈಗ ಅವರು ತಮ್ಮ ಕರ್ತವ್ಯದ ಕಡೆಗೆ ಗಮನ ಹರಿಸುತ್ತಿದ್ದಾರೆ. ಅವರು ನಟಿಸಿರುವ ‘ಕದ್ದ ಚಿತ್ರ’ (Kadda Chitra) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ವೇಳೆ ಅವರು ‘ಟಿವಿ9 ಕನ್ನಡ’ಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ. ಪತ್ನಿ ಬಗೆಗಿನ ನೆನಪುಗಳನ್ನು ವಿಜಯ್​ ರಾಘವೇಂದ್ರ ಮೆಲುಕು ಹಾಕಿದ್ದಾರೆ. ತಮಗಿಂತಲೂ ಸ್ಪಂದನಾಗೆ ಕೋಪ ಜಾಸ್ತಿ ಇತ್ತು ಎಂದು ಅವರು ಹೇಳಿದ್ದಾರೆ. ಪತ್ನಿಯ ಕೋಪಕ್ಕೆ ಕಾರಣ ಆಗುತ್ತಿದ್ದ ಸಂಗತಿಗಳು ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಪುತ್ರ ಶೌರ್ಯನ ಬಗ್ಗೆ ಸ್ಪಂದನಾ ಅವರು ಸಾಕಷ್ಟು ಕಾಳಜಿ ವಹಿಸುತ್ತಿದ್ದರು. ಆ ಎಲ್ಲ ವಿಚಾರಗಳ ಬಗ್ಗೆ ವಿಜಯ್​ ರಾಘವೇಂದ್ರ (Vijay Raghavendra) ಅವರು ಈ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More