ಸ್ಪಂದನ ವಿಜಯ್ ಅಕಾಲಿಕ ಸಾವು, ವಿಜಯ್ ರಾಘವೇಂದ್ರ ಮನೆಗೆ ಆಗಮಿಸಿದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು

ಏತನ್ಮಧ್ಯೆ, ಕನ್ನಡ ಚಿತ್ರರಂಗಕ್ಕೆ ಸಂಬಂಧಪಟ್ಟವರು ರಾಜಕೀಯ ನಾಯಕರು ಸ್ಪಂದನ ಸಾವಿಗೆ ಶೋಕ ವ್ಯಕ್ತಪಡಿಸುತ್ತಿದ್ದಾರೆ ಮತ್ತು ವಿಜಯ್ ಮನೆಗೆ ಭೇಟಿ ನೀಡುತ್ತಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನ ವಿಜಯ್ (Spandana Vijay) ಹಠಾತ್ ಸಾವು ಕನ್ನಡಿಗರಿಗೆ ಅದರಲ್ಲೂ ವಿಶೇಷವಾಗಿ ಚಿತ್ರರಂಗಕ್ಕೆ ಸಂಬಂಧಪಟ್ಟರಿಗೆ ಆಘಾತವನ್ನುಂಟು ಮಾಡಿದೆ. ವಿದೇಶ ಪ್ರವಾಸದಲ್ಲಿದ್ದ ಸ್ಪಂದನ ತೀವ್ರ ಹೃದಯಾಘಾತಕ್ಕೊಳಗಾಗಿ ಅಕಾಲಿಕ ಮರಣವನ್ನಪ್ಪಿದ್ದಾರೆ. ಕಡಿಮೆ ರಕ್ತದೊತ್ತಡದಿಂದಾಗಿ ಅವರು ಹೃದಯಾಘಾತಕ್ಕೊಳಗಾದರು ಅಂತ ವಿಜಯ ಸಹೋದರ ಮತ್ತು ಖ್ಯಾತ ನಟ ಮುರಳಿ ಹೇಳಿದ್ದಾರೆ. ಏತನ್ಮಧ್ಯೆ, ಕನ್ನಡ ಚಿತ್ರರಂಗಕ್ಕೆ ಸಂಬಂಧಪಟ್ಟವರು ರಾಜಕೀಯ ನಾಯಕರು ಸ್ಪಂದನ ಸಾವಿಗೆ ಶೋಕ ವ್ಯಕ್ತಪಡಿಸುತ್ತಿದ್ದಾರೆ ಮತ್ತು ವಿಜಯ್ ಮನೆಗೆ ಭೇಟಿ ನೀಡುತ್ತಿದ್ದಾರೆ. ಚಿತ್ರ ನಿರ್ಮಾಪಕರೂ ಆಗಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು (Munirathna Naidu) ಅವರನ್ನು ವಿಜಯ ರಾಘವೇಂದ್ರ ಮನೆ ಮುಂದೆ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Loading...
Unable to load recommendations.
Follow Us