ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು? ಆಸ್ಪತ್ರೆ ಮುಖ್ಯಸ್ಥ ಕೊಟ್ಟ ಮಾಹಿತಿ ಹೀಗಿದೆ

Updated on: Dec 14, 2025 | 8:14 PM

ಶಾಮನೂರು ಶಿವಶಂಕರಪ್ಪ ನಿಧನದ ಬಗ್ಗೆ ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥ, ಅಳಿಯ ಆಗಿರುವ ಡಾ.ಶಾರಣ್ ಶಿವರಾಜ್ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅಕ್ಟೋಬರ್ 23 ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಇಂದು 6:20 ಕ್ಕೆ ನಿಧನರಾಗಿದ್ದಾರೆ. ಆಸ್ಪತ್ರೆ ಕಡೆಯಿಂದ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅವರ ಮಗ ಬಂದ ನಂತರ ಮುಂದಿನ ನಿರ್ಧಾರ ಮಾಡಲಾಗುತ್ತೆ ಎಂದು ತಮ್ಮ ಮಾವನ ಸಾವಿನ ಬಗ್ಗೆ ಮಾಹಿತಿ ನೀಡಿದರು.

ಬೆಂಗಳೂರು, (ಡಿಸೆಂಬರ್ 14): ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ, ಭಾರತದ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು (94) ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿಸೆಂಬರ್ 14) ಕೊನೆಯುಸಿರೆಳೆದಿದ್ದಾರೆ.

ಇನ್ನು ನಿಧನದ ಬಗ್ಗೆ ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥ, ಅಳಿಯ ಆಗಿರುವ ಡಾ.ಶಾರಣ್ ಶಿವರಾಜ್ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅಕ್ಟೋಬರ್ 23 ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಇಂದು 6:20 ಕ್ಕೆ ನಿಧನರಾಗಿದ್ದಾರೆ. ಆಸ್ಪತ್ರೆ ಕಡೆಯಿಂದ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅವರ ಮಗ ಬಂದ ನಂತರ ಮುಂದಿನ ನಿರ್ಧಾರ ಮಾಡಲಾಗುತ್ತೆ ಎಂದು ತಮ್ಮ ಮಾವನ ಸಾವಿನ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Shamanur Shivashankarappa Death: ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ