ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಭವನದ ತಮ್ಮ ಕೊಠಡಿಯಲ್ಲಿ ಲೋಕಸಭೆಯ ಪಕ್ಷಗಳ ನಾಯಕರು ಮತ್ತು ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಪ್ರಿಯಾಂಕಾ ಗಾಂಧಿ, ರಾಜನಾಥ್ ಸಿಂಗ್ ಸೇರಿದಂತೆ ಎಲ್ಲ ನಾಯಕರು ಹಾಗೂ ಸಂಸದರು ಈ ಸಭೆಯಲ್ಲಿ ಹಾಜರಿದ್ದರು.
ನವದೆಹಲಿ, ಡಿಸೆಂಬರ್ 19: ಸಂಸತ್ತಿನ ಚಳಿಗಾಲದ ಅಧಿವೇಶನ (Parliament Session) ಮುಕ್ತಾಯಗೊಳ್ಳುತ್ತಿದ್ದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಈ ಚಹಾ ಪಾರ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಮುಕ್ತಾಯಗೊಂಡ ಬಳಿಕ ಸಂಸತ್ ಭವನದ ಸ್ಪೀಕರ್ ಕೊಠಡಿಯಲ್ಲಿ ಸಭೆ ನಡೆಯಿತು. ಓಂ ಬಿರ್ಲಾ ಇಂದು 18ನೇ ಲೋಕಸಭೆಯ ಅಧಿವೇಶನವನ್ನು ಮುಕ್ತಾಯಗೊಳಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

