ಸದನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸಿಗ್ತಿಲ್ಲ ಸರಿಯಾದ ಉತ್ತರ: ಗೃಹ ಸಚಿವ ಪರಮೇಶ್ವರ್​​ ಹೇಳಿದ್ದಿಷ್ಟು

Edited By:

Updated on: Mar 16, 2026 | 5:03 PM

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಸಚಿವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದಿರುವ ಬಗ್ಗೆ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಕೇಳಿದ ನೂರಾರು ಪ್ರಶ್ನೆಗಳಿಗೆ ಕಡಿಮೆ ಉತ್ತರಗಳು ಬರುತ್ತಿರುವುದು ಸರ್ಕಾರಕ್ಕೆ ಮುಜುಗರ ತರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

ಬೆಂಗಳೂರು, ಮಾರ್ಚ್​​ 16: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಬಗ್ಗೆ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸದನದಲ್ಲಿ ಸರ್ಕಾರದ ಪರವಾಗಿ ಮಾತನಾಡಿದ್ದು, ಈ ವಿಷಯವನ್ನು ಸರ್ಕಾರ ಈಗಾಗಲೇ ಬಹಳ ಗಂಭೀರವಾಗಿ ಪರಿಗಣಿಸಿದೆ. ಸ್ಪೀಕರ್ ಅವರ ಪೀಠದಿಂದ ಈ ಮಾತು ಬಂದ ಮೇಲೆ ಸರ್ಕಾರ ಇದನ್ನು ಸ್ವಾಭಾವಿಕವಾಗಿ ಗಂಭೀರವಾಗಿ ಪರಿಗಣಿಸುವುದು ಅನಿವಾರ್ಯ. ಕಂದಾಯ ಇಲಾಖೆಯಲ್ಲಿ 90 ಪ್ರಶ್ನೆಗಳಿಗೆ ಕೇವಲ 20 ಉತ್ತರಗಳು ಮಾತ್ರ ಬಂದಿರುವುದು ಸೇರಿದಂತೆ ಹಲವು ಇಲಾಖೆಗಳಲ್ಲಿ ಇದೇ ಪರಿಸ್ಥಿತಿ ಇರುವ ಬಗ್ಗೆ ಪರಿಶೀಲಿಸಲಾಗಿದೆ. ಹಾಗಾಗಿ, ಸರ್ಕಾರದ ಪರವಾಗಿ ಮತ್ತು ಮುಖ್ಯಮಂತ್ರಿಗಳ ಪರವಾಗಿ ಮುಂದಿನ ದಿನಗಳಲ್ಲಿ ಇಂತಹ ಬೆಳವಣಿಗೆ ಮರುಕಳಿಸದಂತೆ ಭರವಸೆ ನೀಡುತ್ತೇನೆ. ಎಲ್ಲಾ ಪ್ರಶ್ನೆಗಳಿಗೆ ಸಕಾಲದಲ್ಲಿ ಉತ್ತರ ಸಿಗಲು ಕ್ರಮ ಕೈಗೊಳ್ಳುವುದಾಗಿ ಪರಮೇಶ್ವರ್​​ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 16, 2026 05:02 PM
Follow Us