ಯಾರಿಗೂ ಹೇಳದೆ ರಾಹುಲ್ ಗಾಂಧಿ ವಿದೇಶಕ್ಕೆ ಹೋಗೋದೇಕೆ?; ಪ್ರಲ್ಹಾದ್ ಜೋಶಿ ಟೀಕೆ
ರಾಹುಲ್ ಗಾಂಧಿ ಯಾವಾಗಲೂ 'ಅಸಂಬದ್ಧ ಮಾತುಗಳನ್ನಾಡುತ್ತಾರೆ' ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಭದ್ರತಾ ಸಂಸ್ಥೆಗಳಿಗೆ ತಿಳಿಸದೆ ರಾಹುಲ್ ಗಾಂಧಿ ಆಗಾಗ ವಿದೇಶ ಪ್ರವಾಸ ಮಾಡುವುದನ್ನು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. ಇತ್ತೀಚೆಗೆ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 13: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ರಾಹುಲ್ ಗಾಂಧಿ (Rahul Gandhi) ಯಾವಾಗಲೂ ‘ಅಸಂಬದ್ಧ ಮಾತುಗಳನ್ನಾಡುತ್ತಾರೆ’ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಭದ್ರತಾ ಸಂಸ್ಥೆಗಳಿಗೆ ತಿಳಿಸದೆ ರಾಹುಲ್ ಗಾಂಧಿ ಆಗಾಗ ವಿದೇಶ ಪ್ರವಾಸ ಮಾಡುವುದನ್ನು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. ಇತ್ತೀಚೆಗೆ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅಸಂಬದ್ಧ ಮಾತುಗಳನ್ನಾಡುವುದರಿಂದ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಅವರು ಬಿಹಾರಕ್ಕೆ ಹೋಗಿ ಹಲವಾರು ಆರೋಪಗಳನ್ನು ಮಾಡಿದರು. ನಂತರ ಅವರು ದೇಶದ ಹೊರಗೆ ಎಲ್ಲೋ ಹೋದರು. ಈಗ, ಅವರು ಎಲ್ಲಿಗೆ ಹೋಗಿದ್ದಾರೆಂದು ಯಾರಿಗೂ ತಿಳಿದಿಲ್ಲ. ಅವರು ವಿದೇಶಕ್ಕೆ ಏಕೆ ಆಗಾಗ ಹೋಗುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ. ಭದ್ರತಾ ಸಂಸ್ಥೆಗಳಿಗೆ ತಿಳಿಸದೆ ಅವರು ದೇಶದ ಹೊರಗೆ ಹೋಗುತ್ತಿದ್ದಾರೆ. ಅದರ ನಡುವೆ ತಮಗೆ ತುಂಬಾ ಬಿಗಿ ಭದ್ರತೆ ನೀಡಬೇಕು ಎಂದು ಅವರು ನಿರೀಕ್ಷಿಸುತ್ತಾರೆ. ಅವರು ವಿರೋಧ ಪಕ್ಷದ ನಾಯಕರಾಗಿರುವುದರಿಂದ ಸರ್ಕಾರ ಭದ್ರತೆಯನ್ನು ಒದಗಿಸುತ್ತಿದೆ. ಆದರೆ ಭದ್ರತಾ ಸಂಸ್ಥೆಗಳಿಗೆ ತಿಳಿಸದೆ ಹೊರಗೆ ಹೋದರೆ ಏನು ಮಾಡಬಹುದು? ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

