ಶಿವಕುಮಾರ ಶ್ರೀಗಳ ಗದ್ದುಗೆಗೆ ಲಕ್ಷ ಪುಷ್ಪ ಬಿಲ್ವಾರ್ಚನೆ; ವಿಡಿಯೋ ನೋಡಿ

ಮಧ್ಯಾಹ್ನ 12.30ಕ್ಕೆ ಡಾ.ಶಿವಕುಮಾರ ಶ್ರೀಗಳ ಗದ್ದುಗೆಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಗುತ್ತದೆ. ಈ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಜ್ಯೋತಿ ಗಣೇಶ್ ಭಾಗಿಯಾಗಿದ್ದಾರೆ.

ತುಮಕೂರು: ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳ ಗದ್ದುಗೆಗೆ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮ ಇಂದು ನಡೆಯಲಿದೆ. ಈ ನಿಟ್ಟಿನಲ್ಲಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 5 ಗಂಟೆಯಿಂದ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನಡೆಯುತ್ತಿದೆ. ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ಕಾರ್ಯಕ್ರಮ ನಡೆಯುತ್ತಿದ್ದು, ಇಂದು (ನವೆಂಬರ್ 29) ಬೆಳಗ್ಗೆ 8ಕ್ಕೆ ಸಮಾರಂಭ ನಡೆಯಲಿದೆ. ಬಳಿಕ ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಧ್ಯಾಹ್ನ 12.30ಕ್ಕೆ ಡಾ.ಶಿವಕುಮಾರ ಶ್ರೀಗಳ ಗದ್ದುಗೆಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಗುತ್ತದೆ. ಈ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಜ್ಯೋತಿ ಗಣೇಶ್ ಭಾಗಿಯಾಗಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿರ ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಿಸಿ ವಿಶೇಷ ಪೂಜೆ ಸಲ್ಲಿಸಿದ್ದು, ಶ್ರೀಗಳ ಗದ್ದುಗೆ ಬಳಿ 85 ಅಡಿ ಎತ್ತರದ ಶಿವಕುಮಾರ ಶ್ರೀಗಳ ಕಟೌಟ್ ನಿರ್ಮಿಸಲಾಗಿದೆ. ವೀರಶೈವ ಲಿಂಗಾಯತ ಮಹಾವೇದಿಕೆ ಹಾಗೂ ಯುವ ವೇದಿಕೆಯಿಂದ ಕಾರ್ಯಕ್ರಮ ನಡೆಯುತ್ತಿದೆ. ಕೊವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದ್ದು, ಯಾವುದೇ ವೇದಿಕೆ ಸಮಾರಂಭ ಇರುವುದಿಲ್ಲ.

ಇದನ್ನೂ ಓದಿ:
ಕೊರೊನಾ ಭೀತಿ ನಡುವೆ ಇಂದು ದಾವಣಗೆರೆಯಲ್ಲಿ 3 ವಿಐಪಿ ಮದುವೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

ಸಚಿವ ಶ್ರೀರಾಮುಲುರಿಂದ ಜೀರ್ಣೋದ್ಧಾರ ಕಾರ್ಯ; ಮಹಾಲಕ್ಷ್ಮಿ ದೇವಾಲಯ, ಪಂಪಾ ಸರೋವರ ಧ್ವಂಸ ಆರೋಪ

Click on your DTH Provider to Add TV9 Kannada